ಮೈಸೂರು

ಶಿಲ್ಪಾ ಸಜೀವ ದಹನ ಪ್ರಕರಣ; ನ್ಯಾಯಕ್ಕೆ ಆಗ್ರಹಿಸಿ ಪ್ರತಿಭಟನೆ

Published On :

ಕ.ಪ್ರ.ವಾರ್ತೆ ,  ಮೈಸೂರು ,  ಮೇ 3
ಅಂತರ್ಜಾತಿ ವಿವಾಹವಾಗಿದ್ದ ಶಿಲ್ಪಾ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ನ್ಯಾಯಕ್ಕಾಗಿ ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಸದಸ್ಯರು ಶನಿವಾರ ಪ್ರತಿಭಟಿಸಿದರು.
ಮೈಸೂರಿನ ರೈಲು ನಿಲ್ದಾಣದ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ಆಗಮಿಸಿದ ಪ್ರತಿಭಟನಾಕಾರರು, ಶಿಲ್ಪಾ ಸಜೀವ ದಹನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆಯಾಗಬೇಕು. ಮಗಳನ್ನು ಕಳೆದುಕೊಂಡಿರುವ ಹೆತ್ತವರ ಜೀವನಕ್ಕೆ ಅಗತ್ಯ ಪರಿಹಾರ ನೀಡಬೇಕು. ಜೀವ ಬೆದರಿಕೆ ಎದುರಿಸುತ್ತಿರುವ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.
ಅಂತರ್ಜಾತಿ, ಅಂತರ ಧರ್ಮೀಯ, ಜಾತಿರಹಿತ ವಿವಾಹಿತರಿಗೆ ಸರ್ಕಾರ ರಕ್ಷಣೆಯ ಖಾತ್ರಿ ನೀಡಬೇಕು. ಇಂತಹ ವಿವಾಹಗಳನ್ನು ಸಹಜವಾಗಿ ಸ್ವೀಕರಿಸುವಂತೆ ಇಡೀ ಸಮಾಜವನ್ನು ಸಂವೇದನಾಶೀಲಗೊಳಿಸಬೇಕು. ನೆರವನ್ನು ಬಯಸುವ ಯುವಜನರ ಕುಟುಂಬಗಳ ಸದಸ್ಯರಿಗೆ ಆಪ್ತ ಸಮಾಲೋಚನೆ ಮಾಡಿ ತಿಳಿವಳಿಕೆ ನೀಡುವ ಜವಾಬ್ದಾರಿಯನ್ನು ಪೊಲೀಸ್, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳು, ರಾಜ್ಯ ಮಹಿಳಾ ಆಯೋಗ ಎಂದರು. ವೇದಿಕೆಯ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಲಕ್ಷ್ಮಿ, ಜಂಟಿ ಕಾರ್ಯದರ್ಶಿ ದೇವಿ, ರಾಜ್ಯ ಸಮಿತಿ ಸದಸ್ಯರಾದ ಸುನಿತಾ, ಶೋಭ, ಶ್ರೀಲಕ್ಷ್ಮಿ, ವಿವಿಧ ಸಂಘಟನೆಗಳ ಮುಖಂಡರಾದ ಸುನಂದ, ಲೀಲಾವತಿ, ಶಕುಂತಲಾ, ಮಂಜುಳ, ಕೆ. ಬಸವರಾಜು, ಲ. ಜಗನ್ನಾಥ್, ಜಯರಾಮ್, ಜಗದೀಶ್ ಸೂರ್ಯ, ಭರತ್‌ರಾಜ್, ಕಲಾವಿದ ಬಾದಲ್ ನಂಜುಂಡಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.