ಛಲದಿಂದ ಗುರಿ ತಲುಪಿ: ಎಂಕೆಎಸ್
ಮೈಸೂರು: ವಿದ್ಯಾರ್ಥಿಗಳು ಸೋಮಾರಿತನ ಬಿಟ್ಟು, ಛಲದಿಂದ ಗುರಿ ತಲುಪಬೇಕು ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಎಂ.ಕೆ. ಸೋಮಶೇಖರ್ ಕರೆ ನೀಡಿದರು.
ಕುವೆಂಪುನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡೆ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ 2013-14 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾನತಾಡಿದರು.
ವಿದ್ಯಾರ್ಥಿಗಳು ತಮಗೆ ಸಿಕ್ಕ ಅವಕಾಶ ಸದುಪಯೋಗ ಮಾಡಿಕೊಳ್ಳಬೇಕು. ಸೋಮಾರಿತನ ಬಿಟ್ಟು, ಓದಿನ ಕಡೆಗೆ ಗಮನ ನೀಡಬೇಕು. ಕ್ಷಣಿಕ ಸುಖದ ಆಸೆಗಾಗಿ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ. ಛಲದಿಂದ ಗುರಿ ಮುಟ್ಟಬೇಕು. ಇಂಗ್ಲಿಷ್ ಮತ್ತು ಕಂಪ್ಯೂಟರ್ ಕಲಿಕೆಗೆ ಹೆಚ್ಚು ಗಮನ ನೀಡಬೇಕು. ಈ ಹಿನ್ನೆಲೆಯಲ್ಲಿ ತಾವು ಚಾಮರಾಜ ಜೋಡಿ ರಸ್ತೆಯಲ್ಲಿ ಕಂಪ್ಯೂಟರ್ ಮತ್ತು ಇಂಗ್ಲಿಷ್ ಕಲಿಕೆಯ ಉಚಿತ ಶಿಬಿರ ಆಯೋಜಿಸುತ್ತಿರುವುದಾಗಿ ಅವರು ಹೇಳಿದರು.
ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸದಿದ್ದರೆ ಕತ್ತಲೆಯಲ್ಲಿದ್ದ ಅನೇಕರು ಬೆಳಕಿಗೆ ಬರಲು ಸಾಧ್ಯ ಆಗುತ್ತಿರಲಿಲ್ಲ. ಮಹಿಳೆಯರಿಗೆ ಸಮಾನತೆ ನೀಡಿದರು. ದೂರದೃಷ್ಟಿಯೊಂದಿಗೆ ಸಂವಿಧಾನ ರಚಿಸಿದ್ದಾರೆ. ಅವರ ಎಲ್ಲಾ ಆಲೋಚನೆಗಳು ಮತ್ತು ಚಿಂತನೆಗಳು ಸಂಪೂರ್ಣವಾಗಿ ಜಾರಿ ಆಗಬೇಕು ಎಂದರು.
ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಪ್ರೊ.ಸಿ.ಕೆ. ಮಹೇಶ್ವರಪ್ಪ, ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ಎಂ. ರುದ್ರಯ್ಯ, ರಾಷ್ಟ್ರಮಟ್ಟದ ಅಥ್ಲೀಟ್ ಕೆ.ಜಿ. ಕವಿತಾ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಉದಯಶಂಕರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

