ಮೈಸೂರು

ಎಂಜಿನಿಯರ್‌ಗಳಿಂದ ಗುತ್ತಿಗೆದಾರರಿಗೆ ಕಿರುಕುಳ

Published On :

ಮೈಸೂರು: ಪಂಚಾಯತ್ ರಾಜ್ ಎಂಜಿನಿಯರ್‌ಗಳಿಂದ ಗುತ್ತಿಗೆದಾರರಿಗೆ ಕಿರುಕುಳ ಉಂಟಾಗುತ್ತಿದೆ ಎಂದು ಮೈಸೂರು ತಾ.ಪಂ. ಸದಸ್ಯ ಗೋವಿಂದಸ್ವಾಮಿ ಆರೋಪಿಸಿದರು.
ತಾಲೂಕಿನ ವಿವಿಧ ಕಾಮಗಾರಿಗಳ ಗುಣಮಟ್ಟ ಹಾಗೂ ಅಭಿವೃದ್ಧಿಗಳ ಬಗ್ಗೆ ಗಮನ ಹರಿಸದ ಪಂಚಾಯತ್‌ರಾಜ್ ಎಂಜಿನಿಯರ್‌ಗಳು ಗುತ್ತಿಗೆದಾರರು ನಡೆಸುವ ಕಾಮಗಾರಿಗಳಿಗೆ ಶೇ.10 ರಿಂದ 15 ರವರಗೆ ಕಮಿಷನ್ ನೀಡುವಂತೆ ಪೀಡಿಸುತ್ತಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಮೈಸೂರು ತಾಪಂ ಈ ಸಾಲಿನಲ್ಲಿ ಏಪ್ರಿಲ್‌ವರೆಗೆ ಸರ್ಕಾರದಿಂದ ಬಂದ ಹಣದಲ್ಲಿ 255 ಲಕ್ಷ ಖರ್ಚಾಗಿಲ್ಲ. ರಸ್ತೆ, ಚರಂಡಿ, ಪೈಪ್‌ಲೈನ್ ಕಾಮಗಾರಿ ನಿರ್ವಹಿಸುವುದರಿಂದ ಅತಿ ಹೆಚ್ಚು ಲಾಭವಾಗಲಿದೆ. ಆ ಕಾರಣ ಅಂಗನವಾಡಿ, ಶಾಲಾ ಕಟ್ಟಡಗಳನ್ನು ನಿರ್ವಹಿಸಲು ಯಾರೂ ಮುಂದೆ ಬರುತ್ತಿಲ್ಲ ಎಂದರು. ಇಂದಿನ ನಿರುದ್ಯೋಗಿ ಯುಗದಲ್ಲಿ ಹಲವಾರು ನಿರುದ್ಯೋಗಿ ಯುವಕರು ಗುತ್ತಿಗೆ ಕೆಲಸ ಮಾಡಲು ಮುಂದೆ ಬಂದರೂ ಕೆಲಸ ನಿರ್ವಹಿಸಿ ಎಂಜಿನಿಯರಗಳಿಗೆ ಕಮಿಷನ್ ನೀಡಿ ನಷ್ಟ ಅನುಭವಿಸುತ್ತಿರುವ ಕಾರಣ ಗುತ್ತಿಗೆ ಕೆಲಸ ಮಾಡಲು ಹಿಂಜರಿಯುತ್ತಿದ್ದಾರೆ. ಆದ್ದರಿಂದ ಈ ಎಂಜಿನಿಯರ್‌ಗಳಿಂದ ತೊಂದರೆ ಅನುಭವಿಸುತ್ತಿರುವ ಗುತ್ತಿಗೆದಾರರಿಗೆ ಸರ್ಕಾರ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು. ಇದೇ ರೀತಿ ಕಿರುಕುಳ ಮುಂದುವರಿದರೆ ರೈತರಂತೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎಂದುರಾಗಲಿದೆ. ಆದ್ದರಿಂದ ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನ ಹರಿಸಬೇಕು. ಜೊತೆಗೆ ಮೈಸೂರು ತಾಲೂಕು ಪ್ರಗತಿಗೆ ಪೂರಕ ವಾತಾವರಣ ನಿರ್ಮಿಸಬೇಕು ಎಂದು ತಿಳಿಸಿದರು. ಗ್ರಾಪಂ ಸದಸ್ಯ ಬೀರಿಹುಂಡಿ ಶಿವಣ್ಣ, ಜೆಡಿಎಸ್ ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷ ಗಂಗಾಧರಗೌಡ, ಮುಖಂಡ ವಿಜಯಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.