ಮೈಸೂರು

ತಂತ್ರಜ್ಞಾನದಿಂದ ಸಾರ್ವಜನಿಕ ಗ್ರಂಥಾಲಯ ಕ್ಷೀಣ

Published On :

ಮೈಸೂರು: ಅತ್ಯಾಧುನಿಕ ಡಿಜಿಟಲ್ ಗ್ರಂಥಾಲಯದ ಭರಾಟೆಯಲ್ಲಿ ಸಿಲುಕಿ ಸಾರ್ವಜನಿಕ ಗ್ರಂಥಾಲಯ ಕ್ಷೀಣಿಸುತ್ತಿವೆ ಎಂದು ಮೈಸೂರು ವಿವಿ ಗ್ರಂಥಪಾಲಕ ಪ್ರೊ.ಸಿ.ಪಿ. ರಾಮಶೇಷ್ ಆತಂಕ ವ್ಯಕ್ತಪಡಿಸಿದರು.
ಮೈಸೂರು ವಿವಿಯ ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗದ ವತಿಯಿಂದ ಇಎಂಎಂಆರ್ಸಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಶೈಕ್ಷಣಿಕ ವರ್ಷದ ಯೋಜನಾ ವೇದಿಕೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾಹಿತಿ ಉಪನ್ಯಾಸ ನೀಡಿದರು.
ಮುಂದುವರಿದ ಅನೇಕ ದೇಶಗಳಲ್ಲಿ ಡಿಜಿಟಲ್ ಗ್ರಂಥಾಲಯಗಳು ಹೆಚ್ಚಾಗಿವೆ. ಅದರ ಪ್ರಭಾವದಿಂದಾಗಿ ಸುಮಾರು 400 ಗ್ರಂಥಾಲಯಗಳು ಕಣ್ಮರೆಯಾಗಿವೆ. ಇಂತಹ ಬೆಳವಣಿಗೆಗಳು ನಮ್ಮ ದೇಶದಲ್ಲೂ ಕಾಣುತ್ತಿವೆ. ಮೈಸೂರು ವಿವಿಯ ಡಿಜಿಟಲ್ ಗ್ರಂಥಾಲಯದಲ್ಲಿ ಸುಮಾರು 24 ಲಕ್ಷ ಪುಸ್ತಕಗಳು, 18 ಸಾವಿರ ನಿಯತಕಾಲಿಕೆಗಳು ಇವೆ. ಅವುಗನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಅರ್ಥಶಾಸ್ತ್ರ ಮತ್ತು ಸಹಕಾರ ಅಧ್ಯಯನ ವಿಭಾಗದ ಪ್ರೊ.ಡಿ.ಎಸ್. ಲೀಲಾವತಿ ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕ ಡಾ.ಎಂ. ಮಹೇಶ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.