ಹಾಸ್ಟೆಲ್ ಕಾಮಗಾರಿ ಪರಿಶೀಲನೆ
ಕ.ಪ್ರ.ವಾರ್ತೆ ಕೆ.ಆರ್. ನಗರ ಮೇ 9
ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಿಂಭಾಗ ನಿರ್ಮಾಣ ಮಾಡುತ್ತಿರುವ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿಯರ ನಿಲಯದ ಕಾಮಗಾರಿಯನ್ನು ಶಾಸಕ ಸಾ.ರಾ. ಮಹೇಶ್ ಪರಿಶೀಲಿಸಿದರು.
ಕಾಮಗಾರಿಯನ್ನು ಶರವೇಗದಲ್ಲಿ ಮುಗಿಸಿ ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿನಿಯರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ನಿರ್ಮಿತಿ ಕೇಂದ್ರದ ಎಂಜಿನಿಯರ್ ರಮೇಶ್, ಗುತ್ತಿಗೆದಾರರಾದ ಎಚ್.ಎಸ್. ವೇಣು ಮತ್ತು ಅಭಿ ಸುರೇಶ್ ಅವರಿಗೆ ಸೂಚಿಸಿದ ಶಾಸಕರು, ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಸೂಚಿಸಿದರು.
ಶಾಸಕರು ನಿಲಯದ ನಿರ್ಮಾಣಕ್ಕೆ ಯುಜಿಸಿ ವತಿಯಿಂದ 90 ಲಕ್ಷ ಅನುದಾನ ನೀಡಿದ್ದು, ನಾನು ರಾಜ್ಯ ಸರ್ಕಾದಿಂದ 30 ಲಕ್ಷ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿಸಲು ಕ್ರಮ ಕೈಗೊಂಡಿದ್ದು, ಶೀಘ್ರದಲ್ಲೆ ಹಣ ಬಿಡುಗಡೆಯಾಗಲಿದೆ. ಉತ್ತಮ ಸೌಲಭ್ಯವುಳ್ಳ ವಿದ್ಯಾರ್ಥಿನಿಯರ ನಿಲಯ ನಿರ್ಮಾಣವಾಗಲಿದ್ದು, ಇದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿನಿಯರು ನಗರ ಪ್ರದೇಶದಲ್ಲಿ ವಾಸ್ತವ್ಯವಿದ್ದು, ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಗುತ್ತದೆ ಎಂದರಲ್ಲದೆ, ಕಟ್ಟಡದ ಕಾಮಗಾರಿ ಉತ್ತಮ ಗುಣಮಟ್ಟದಿಂದ ಕೂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಕೊಂಡರಸಯ್ಯ, ಮೈಮುಲ್ ಮಾಜಿ ಅಧ್ಯಕ್ಷ ಎ.ಟಿ. ಸೋಮಶೇಖರ್, ಪುರಸಭಾ ಸದಸ್ಯ ಕೆ.ಎಲ್. ಜಗದೀಶ್, ಎಪಿಎಂಸಿ ನಿರ್ದೇಶಕ ಕುಪ್ಪಳ್ಳಿ ಸೋಮು, ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್, ಮುಖಂಡರಾದ ಮಿರ್ಲೆ ಧನಂಜಯ, ಆಲಮಟ್ಟಿ ಪ್ರಕಾಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

