ಶಿಕ್ಷಣದಿಂದ ಸಮಾಜ ಅಭಿವೃದ್ಧಿ
ಕ.ಪ್ರ.ವಾರ್ತೆ ಕೆ.ಆರ್. ನಗರ ಮೇ 10
ಸಮಾಜದ ಸಮಗ್ರ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯವಿದ್ದು, ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣದ ಜತೆಗೆ ಮೌಲ್ಯಯುತ ಶಿಕ್ಷಣ ಕೊಡಿಸಬೇಕೆಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ತಾಲೂಕಿನ ಹೆಬ್ಸೂರು ಗ್ರಾಮದಲ್ಲಿ 226 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಸಂಕೀರ್ಣದ ಎರಡನೇ ಹಂತದ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿನಲ್ಲಿ ಎರಡು ಮೊರಾರ್ಜಿ ವಸತಿ ಶಾಲೆಗಳು ಮತ್ತು ಒಂದು ಕಿತ್ತೂರು ಚೆನ್ನಮ್ಮ ವಸತಿ ಶಾಲೆ ಇದ್ದು, ಇದು ಜಿಲ್ಲೆಯಲ್ಲಿಯೇ ಪ್ರಥಮ ಎಂದು ತಿಳಿಸಿದರು.
ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಬೋಧಿಸಿ ಅವರಲ್ಲಿರುವ ಸೂಕ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು, ಇದರಿಂದ ಅವರು ತಮ್ಮ ಪ್ರತಿಭೆ ಪ್ರದರ್ಶಿಸಿ ಉತ್ತಮ ಸಾಧನೆ ಮಾಡುತ್ತಾರೆ ಎಂದರಲ್ಲದೆ, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಖಾಸಗಿ ಶಿಕ್ಷಣ ಸಂಸ್ಥೆಗಳಿಗಿಂತ ಉತ್ತಮ ಸಾಧನೆ ಮಾಡುತ್ತಿರುವುದು ಶ್ಲಾಘನೀಯ ಎಂದು ಪ್ರಶಂಸಿಸಿದರು.
ತಾಲೂಕಿಗೆ ಎರಡು ಮೊರಾರ್ಜಿ ವಸತಿ ಶಾಲೆಗಳು ಮತ್ತು ಒಂದು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳು ಮಂಜೂರಾಗಬೇಕಾದರೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಸಹಕಾರವು ಕಾರಣ ಎಂದು ತಿಳಿಸಿದರು.
ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಜೆ.ದ್ವಾರಕೀಶ್, ತಾಪಂ ಅಧ್ಯಕ್ಷೆ ವಿಜಯಲಕ್ಷ್ಮೀ, ಮೈಮುಲ್ ಮಾಜಿ ಅಧ್ಯಕ್ಷ ಎ.ಟಿ.ಸೋಮಶೇಖರ್, ಹೊಸೂರು ಸಹಕಾರ ಬ್ಯಾಂಕ್ ಮಾಜಿ ಅಧ್ಯಕ್ಷ ಎಚ್.ಆರ್. ಮಧುಚಂದ್ರ, ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್, ಕೆಎಸ್ಆರ್ಟಿಸಿ ನಿವೃತ್ತ ಜಿಲ್ಲಾ ಅಧಿಕಾರಿ ರಾಮೇಗೌಡ, ಪುರಸಭಾ ಮಾಜಿ ಅಧ್ಯಕ್ಷ ಡಿ.ಕಾಂತರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಆರ್. ಮಧುಚಂದ್ರ, ಜೆಡಿಎಸ್ ಮುಖಂಡ ಬಿ.ಜೆ.ಸಂತೋಷ್, ಕರ್ನಾಟಕ ವಸತಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಸವರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

