ಕಚೇರಿ ಸ್ಥಳಾಂತರ ಬೇಡ
ಕ.ಪ್ರ.ವಾರ್ತೆ ಮೈಸೂರು ಮೇ 12
ಮೈಸೂರು ದಕ್ಷಿಣ ಉಪ ನೋಂದಣಾಧಿಕಾರಿ ಕಚೇರಿಯನ್ನು ರಾಮಕೃಷ್ಣ ನಗರಕ್ಕೆ ಸ್ಥಳಾಂತರಿಸುವುದನ್ನು ವಿರೋಧಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ಪ್ರತಿಭಟಿಸಿದರು.
ನಜರಬಾದ್ನ ಮದ್ವೇಶ ವಾಣಿಜ್ಯ ಸಂಕೀರ್ಣದ ಮೂರನೆ ಮಹಡಿಯಲ್ಲಿ ಸುಮಾರು 10 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಮೈಸೂರು ದಕ್ಷಿಣ ಉಪನೋಂದಣಾಧಿಕಾರಿ ಕಚೇರಿಯನ್ನು ಈಗ ರಾಮಕೃಷ್ಣನಗರ ಐ ಬ್ಲಾಕ್ನ ಖಾಸಗಿ ವಾಣಿಜ್ಯ ಕಟ್ಟಡಕ್ಕೆ ಸ್ಥಳಾಂತರಿಸುತ್ತಿರುವುದಾಗಿ ತಿಳಿದುಬಂದಿದೆ. ಮದ್ವೇಶ ಕಾಂಪ್ಲೆಕ್ಸ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಸೂರು ದಕ್ಷಿಣ ಉಪ ನೋಂದಣಾಧಿಕಾರಿ ಕಚೇರಿಯನ್ನು 9 ಕಿ.ಮೀ. ದೂರದ ರಾಮಕೃಷ್ಣನಗರಕ್ಕೆ ಸ್ಥಳಾಂತರಿಸಿರುವುದು ಸರಿಯಲ್ಲ ಎಂದರು.
ಒಂದು ವೇಳೆ ಈ ದಕ್ಷಿಣ ಉಪ ನೋಂದಣಾಧಿಕಾರಿ ಕಚೇರಿಯು ಅಲ್ಲಿಗೆ ಸ್ಥಳಾಂತರಗೊಂಡರೆ ಈ ದಕ್ಷಿಣ ಉಪನೋಂದಣಾಧಿಕಾರಿ ಕಚೇರಿ ವ್ಯಾಪ್ತಿಗೆ ಒಳಪಡುವ ದೇವರಾಜ ಅರಸ್ ರಸ್ತೆ, ಹುಲ್ಲಿನಬೀದಿ, ಚಾಮುಂಡಿಪುರಂ, ವಿದ್ಯಾರಣ್ಯಪುರಂ, ಅಶೋಕಪುರಂ ಹಾಗೂ ವಿಜಯನಗರದ ಸಾರ್ವಜನಿಕರಿಗೆ ತೀರ ತೊಂದರೆ ಆಗುತ್ತದೆ. ಸರಿಯಾದ ಬಸ್ ಸೌಲಭ್ಯ ಇಲ್ಲದ ರಾಮಕೃಷ್ಣನಗರಕ್ಕೆ ಗ್ರಾಮಾಂತರ ಪ್ರದೇಶದ ಸಾರ್ವಜನಿಕರು ತೆರಳಲು ಬಹಳ ತೊಂದರೆ ಆಗುತ್ತದೆ ಎಂದು ದೂರಿದರು.
ಆದ್ದರಿಂದ ಉಪ ನೋಂದಣಾಧಿಕಾರಿ 4 ಕಚೇರಿಗಳು ಒಂದೆ ಸೂರಿನಡಿ ಸಿಗುವಂತೆ ಮಿನಿ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು. ಜಿಲ್ಲಾ ಉಸ್ತುವಾರಿ ಮತ್ತು ಕಂದಾಯ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ಸೇನಾಪಡೆಯ ಎಂ.ಬಿ. ಪ್ರಭುಶಂಕರ್, ಜೆ.ಪಿ.ಗೌಡ, ಜಗದೀಶ್, ರವಿತೇಜ, ರಾಜೇಶ್, ಪ್ರಜೀಶ್, ಪ್ರದೀಪ್, ರಘುರಾಮ್, ನಾಗಣ್ಣ, ಪ್ರಕಾಶ್, ಕೃಷ್ಣ, ಸುಬ್ಬೇಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

