ಕುಡಿಯುವ ನೀರಿಗಾಗಿ ಪ್ರತಿಭಟನೆ
ಕ.ಪ್ರ.ವಾರ್ತೆ ಪಿರಿಯಾಪಟ್ಟಣ ಮೇ 13
ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವುದನ್ನು ವಿರೋಧಿಸಿ, ತಾಲೂಕಿನ ಮುತ್ತೂರು ಗ್ರಾಪಂ ವ್ಯಾಪ್ತಿಯ ಬೇಗೂರು ಗ್ರಾಮದ ದಲಿತರ ಕಾಲೋನಿ ನಿವಾಸಿಗಳು ಪ್ರತಿಭಟಿಸಿದರು.
ಕಾಲೋನಿಯಲ್ಲಿ ಸುಮಾರು 300ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದು, ಕನಿಷ್ಠ ಮೂಲ ಸೌಕರ್ಯವೂ ಇಲ್ಲವಾಗಿದೆ. ಕುಡಿಯುವ ನೀರು, ಚರಂಡಿ ವ್ಯವಸ್ಥೆ, ಬೀದಿ ದೀಪದ ವ್ಯವಸ್ಥೆ, ರಸ್ತೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯದ ಕೊರತೆಯಿಂದಾಗಿ ಕಾಲೋನಿಯ ಜನತೆ ಪರಿತಪಿಸುವಂತಾಗಿದೆ. ಕುಡಿಯುವ ನೀರಿಗಾಗಿ ಕಿರುನೀರು ಸರಬರಾಜು ವ್ಯವಸ್ಥೆ ಮಾಡಲಾಗಿದ್ದರೂ ಇದು ರಿಪೇರಿಗೆ ಬಂದು ವರ್ಷಗಳೇ ಕಳೆದಿವೆ. ಇರುವ ಎರಡು ಕೈ ಪಂಪ್ಗಳೂ ಕೆಟ್ಟುಹೋಗಿವೆ. ಇದರಿಂದಾಗಿ ಹೊಲಗದ್ದೆಗಳಲ್ಲಿ ರೈತರು ತೋಡಿಸಿಕೊಂಡಿರುವ ಕೊಳವೆ ಬಾವಿಗಳಿಂದ ವಿದ್ಯುತ್ ಇದ್ದ ವೇಳೆ ನೀರನ್ನು ಒದಗಿಸಿಕೊಳ್ಳುವಂತಾಗಿದೆ.
ಈ ಬಗ್ಗೆ ಹಲವಾರು ಬಾರಿ ಜನಪ್ರತಿನಿಧಿಗಳಿಗೆ ಅಧಿಕಾರಿಗಳಿಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ. ಮುಂದಿನ ದಿನಗಳಲ್ಲಿ ತಮ್ಮ ಸಮಸ್ಯೆಗೆ ಪರಿಹಾರ ಒದಗಿಸಿಕೊಡದಿದ್ದಲ್ಲಿ ತಾಲೂಕು ಕಚೇರಿಯ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕಾಲೋನಿಯ ನಿವಾಸಿಗಳು ಎಚ್ಚರಿಸಿದ್ದಾರೆ.
ಕರ್ನಾಟಕ ಕಾವಲು ಪಡೆ ಬೇಗೂರು ಘಟಕದ ಅಧ್ಯಕ್ಷ ಬಿ.ಜೆ.ನರಸಿಂಹಮೂರ್ತಿ, ಬನಶಂಕರಿ ಮಹಿಳಾ ಸಂಘದ ಅಧ್ಯಕ್ಷೆ ವೆಂಕಟಲಕ್ಷ್ಮಿ, ಸರಸ್ವತಿ ಮಹಿಳಾ ಸಂಘದ ಅಧ್ಯಕ್ಷೆ ಲಕ್ಷ್ಮಮ್ಮ, ಗ್ರಾಮದ ಮುಖಂಡರಾದ ಯಜಮಾನ್ ಲೋಕೇಶ್, ರಾಜು, ರಮೇಶ್, ಮಧು, ಸುರೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

