ಮೈಸೂರು

ಕನ್ನಡಕ್ಕೆ ಬಂದಿದೆ ಗಂಡಾಂತರ

Published On :

ಕ.ಪ್ರ.ವಾರ್ತೆ    ಕೆ.ಆರ್. ನಗರ    ಮೇ 13
ಕನ್ನಡಕ್ಕೆ ಗಂಡಾಂತರದ ಕಾಲ ಬಂದಿದ್ದು, ಕನ್ನಡಿಗರೆಲ್ಲಾ ಒಗ್ಗಟ್ಟಿನಿಂದ ಹೋರಾಟ ಮಾಡದಿದ್ದರೆ ಭಾಷೆಗೆ ಉಳಿಗಾಲ ಇಲ್ಲ ಎಂದು ಸಾಹಿತಿ ಜಯಪ್ಪ ಹೊನ್ನಾಳಿ ಆತಂಕ ವ್ಯಕ್ತಪಡಿಸಿದರು.
ಪಟ್ಟಣದ ಬಯಲು ರಂಗ ಮಂದಿರದಲ್ಲಿ ನಡೆದ ಸೃಜನ ಲೇಖಕರು ಮತ್ತು ಕಲಾವಿದರ ಬಳಗದ 11ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಮತ್ತು ಸೃಜನ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಇಂಗ್ಲಿಷ್ ಮೇಲಿನ ವ್ಯಾಮೋಹ ಜನರಲ್ಲಿ ಹೆಚ್ಚುತ್ತಿರುವುದರಿಂದ ಆ ಭಾಷೆ ಇಂದು ನಮ್ಮನ್ನು ಆಳುತ್ತಿದೆ ಎಂದರು.
ಭಾಷೆಯ ಉಳಿವಿಗಾಗಿ ರಾಜ್ಯ ಸರ್ಕಾರ ಕಟಿಬದ್ಧವಾಗಿ ಸುಪ್ರೀಂ ಕೋರ್ಟ್ಗೆ ವಾಸ್ತವಿಕತೆಯ ಅರಿವು ಮಾಡಿಕೊಟ್ಟು ಕನ್ನಡದ ಉಳಿವಿಗೆ ಮುಂದಾಗಬೇಕು. ಪ್ರತಿಯೊಬ್ಬರು ಭಾಷಾ ಪ್ರೇಮ ಬೆಳೆಸಿಕೊಳ್ಳಬೇಕೆಂದು ತಿಳಿಸಿದರು.ಜಿಲ್ಲಾ ಕಸಾಪ ಕಾರ್ಯದರ್ಶಿ ವೈ.ಡಿ. ರಾಜಣ್ಣ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪತ್ರಕರ್ತ ಜಯರಾಂ, ನಿವೃತ್ತ ಡಿವೈಎಸ್ಪಿ ಜೆ.ಡಿ. ಪ್ರಕಾಶ್, ಗುಮಾಸ್ತ ಅಶ್ವಥ್ಕುಮಾರ್, ಮುಖ್ಯ ಪೇದೆ ಎಂ.ಎಲ್. ಚಿಂದೇಗೌಡ, ಸಾರ್ವಜನಿಕ ಆಸ್ಪತ್ರೆಯ ದಾದಿ ಎಂ.ಪುಷ್ಪಾವತಿ, ರಾಷ್ಟ್ರೀಯ ವಾಲಿಬಾಲ್ ಕ್ರೀಡಾಪಟು ಆರ್. ಪವನ್ಗೆ ಸೃಜನ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬಳಗದ ಅಧ್ಯಕ್ಷ ರಾ.ಸುರೇಶ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎನ್.ಪ್ರಸನ್ನ ಬಹುಮಾನ ವಿತರಿಸಿದರು. ಪುರಸಭಾ ಮಾಜಿ ಅಧ್ಯಕ್ಷ ಡಿ.ಕಾಂತರಾಜು, ಸದಸ್ಯ ಎನ್. ಶಿವಕುಮಾರ್, ಸರ್ವೋದಯ ಕರ್ನಾಟಕ ಪಕ್ಷದ ಅಧ್ಯಕ್ಷ ಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.