ಮೈಸೂರು

ನೇತಾಜಿನಗರ ಉದ್ಯಾನ ಉಳಿಸಿ: ನಿವಾಸಿಗಳ ಆಗ್ರಹ

Published On :

ಕ.ಪ್ರ.ವಾರ್ತೆ    ಮೈಸೂರು    ಮೇ 14
ಆಲನಹಳ್ಳಿ ಮತ್ತು ಯರಗನಹಳ್ಳಿ ಸಮೀಪದಲ್ಲಿರುವ ನೇತಾಜಿನಗರದ ಉದ್ಯಾನದಲ್ಲಿ ಸಮುದಾಯ ಭವನ ನಿರ್ಮಿಸಲು ಸಿದ್ಧತೆ ನಡೆದಿದ್ದು, ಇದರಿಂದ ನಿವಾಸಿಗಳಿಗೆ ತೊಂದರೆಯಾಗಲಿದೆ. ಹೀಗಾಗಿ ಉದ್ಯಾನದಲ್ಲಿ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ನೇತಾಜಿನಗರ ನಿವಾಸಿಗಳ ಒಕ್ಕೂಟದ ಅಧ್ಯಕ್ಷ ಹಾಗೂ ನಿವೃತ್ತ ಡಿವೈಎಸ್ಪಿ ಎಚ್.ಎಂ. ಉಮೇಶ್ ಆಗ್ರಹಿಸಿದರು.
ದಿ ಪೊಲೀಸ್ ಟ್ರೈನಿಂಗ್ ಕಾಲೇಜ್ ಮತ್ತು ಕೆಎಸ್‌ಆರ್‌ಪಿ ಮೌಂಟೆಡ್ ಕಂಪನಿ ಮೈಸೂರು ನೌಕರರ ಗೃಹ ನಿರ್ಮಾಣ ಸಹಕಾರ ಸಂಘವು ನೇತಾಜಿನಗರ ಬಡಾವಣೆಯನ್ನು ಯಾವುದೇ ಅನುಮತಿ ಪಡೆಯದೇ ನಿರ್ಮಿಸಿದೆ. ಬಡಾವಣೆಯಲ್ಲಿರುವ ಉದ್ಯಾನದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸಂಘದ ಅಧ್ಯಕ್ಷ ಮತ್ತು ಕಾರ್ಯದರ್ಶಿ ಮುಂದಾಗಿದ್ದಾರೆ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಈ ಸಂಬಂಧ ಆಲನಹಳ್ಳಿ ಗ್ರಾಪಂ ಪಿಡಿಒ ಅವರು ಅನುಮತಿ ಪಡೆಯದೇ ಯಾವುದೇ ಅನಧಿಕೃತವಾಗಿ ಕಟ್ಟಡ ನಿರ್ಮಿಸದಂತೆ ಸೂಚಿಸಿದ್ದಾರೆ. ಹೀಗಿದ್ದರೂ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಉದ್ಯಾನದಲ್ಲಿ ಕಟ್ಟಡ ನಿರ್ಮಾಣಕ್ಕೆ ಇಟ್ಟಿಗೆ, ಮರಳು ಜಲ್ಲಿ ಇನ್ನಿತರ ಸಾಮಗ್ರಿಗಳನ್ನು ಸಂಗ್ರಹಿಸಿದ್ದಾರೆ. ಹೀಗಾಗಿ ಕಟ್ಟಡ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.
ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಗೋಲ್‌ಮಾಲ್‌ಗಳು ನಡೆದಿದ್ದು, ಈಗಾಗಲೇ ನಿವೇಶನ ಪಡೆದು ಮನೆ ಕಟ್ಟಿಸಿಕೊಂಡಿರುವವರು ತೊಂದರೆ ಅನುಭವಿಸುತ್ತಿದ್ದಾರೆ. ನಡೆದಿರುವ ಅಕ್ರಮಗಳ ಬಗ್ಗೆ ಸದ್ಯದಲ್ಲೇ ದಾಖಲೆಯೊಂದಿಗೆ ಬಹಿರಂಗಪಡಿಸಲಾಗುವುದು ಎಂದ ಅವರು, ನೇತಾಜಿನಗರವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸಬೇಕು ಎಂದು ಕೋರಿದರು. ನೇತಾಜಿನಗರ ನಿವಾಸಿಗಳಾದ ಜವರೇಶ್, ಮಲೆ ಮಾದಪ್ಪ, ಚಂದ್ರಪ್ಪ, ಮರಿಲಿಂಗಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.