ಮೃತರ ಕುಟುಂಬಗಳಿಗೆ ಖಾದರ್ ಸಾಂತ್ವನ
ಕ.ಪ್ರ.ವಾರ್ತೆ ಪಿರಿಯಾಪಟ್ಟಣ ಮೇ 14
ತಾಲೂಕಿನ ಕಂಪಲಾಪುರ ಬಳಿ ಬುಧವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತದೇಹಗಳನ್ನು ಪಟ್ಟಣದ ಮಲಬಾರ್ ಜಾಮಿಯಾ ಮಸೀದಿಗೆ ತಂದು ಅಂತ್ಯ ಸಂಸ್ಕಾರಕ್ಕೆ ಮುನ್ನ ನಡೆಯಬೇಕಾದ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಂತರ ಮೃತದೇಹಗಳನ್ನು ಪಟ್ಟಣದ ಹಬಟೂರು ರಸ್ತೆಯಲ್ಲಿರುವ ಮಲಬಾರ್ ಜಾಮಿಯಾ ಮಸೀದಿಗೆ ತಂದು ಅಲ್ಲಿ ಸ್ಥಳೀಯರ ನೆರವಿನೊಂದಿಗೆ ಅಂತ್ಯ ಸಂಸ್ಕಾರಕ್ಕೂ ಮುನ್ನ ನಡೆಯಬೇಕಾದ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ನಂತರ ಆಂಬುಲೆನ್ಸ್‌ಗಳ ಮೂಲಕ ಮೃತದೇಹಗಳನ್ನು ದೇರಳಕಟ್ಟೆಗೆ ಕೊಂಡೊಯ್ಯಲಾಯಿತು.
ಸಚಿವ ಯು.ಟಿ. ಖಾದರ್ ಭೇಟಿ: ಆರೋಗ್ಯ ಸಚಿವ ಯು.ಟಿ. ಖಾದರ್ ಮಸೀದಿಗೆ ಭೇಟಿ ನೀಡಿ ಮೃತರ ಸಂಬಂಧಿಕರಿಗೆ ಸಾಂತ್ವನ ಹೇಳಿದರು. ಪಟ್ಟಣದ ಜಾಮಿಯಾ ಮಸೀದಿಯವರ ಹಾಗೂ ಸ್ಥಳೀಯರ ಸಹಕಾರ ಮತ್ತು ಪೊಲೀಸರ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದರು.
ಮೃತರ ಕುಟುಂಬಗಳಿಗೆ ಪರಿಹಾರ ಕೊಡಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಮೈಸೂರು ಹಾಗೂ ಮಡಿಕೇರಿ ಮಾರ್ಗದಲ್ಲಿ ಅಪಘಾತಗಳು ಹೆಚ್ಚುತ್ತಿದ್ದು, ಈ ಮಾರ್ಗದಲ್ಲಿ ಅಪಘಾತದಲ್ಲಿ ಗಾಯಗೊಂಡವರಿಗೆ ತರ್ತು ಚಿಕಿತ್ಸೆ ನೀಡುವ ಸಂಚಾರಿ ಕೇಂದ್ರವನ್ನು ತೆರೆಯುವ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾವ ಇಡುವುದಾಗಿ ಹಾಗೂ ಅಪಘಾತಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

