ಸಾಂಕ್ರಾಮಿಕ ರೋಗಗಳ ಜಾಗೃತಿ
ಕ.ಪ್ರ.ವಾರ್ತೆ ಕೆ.ಆರ್. ನಗರ ಮೇ 14
ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಎಚ್ಚರ ತಪ್ಪಿದರೆ ಮಾರಣಾಂತಿಕ ಕಾಯಿಲೆಗೆ ಆಹ್ವಾನ ನೀಡಿದಂತಾಗುತ್ತದೆ ಎಂಬ ಘೋಷ ವಾಕ್ಯಗಳೊಂದಿಗೆ ತಾಲೂಕಿನ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರು ಕರಪತ್ರ ಹಂಚುವ ಮೂಲಕ ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಬಗ್ಗೆ ಜಾಗೃತಿ ಮೂಡಿಸಿದರು.
ಬೇಸಿಗೆ ಸಮಯವಾಗಿರುವುದರಿಂದ ಆಸ್ಪತ್ರೆ ವ್ಯಾಪ್ತಿಯ ದೊಡ್ಡಕೊಪ್ಪಲು ಗ್ರಾಮದಲ್ಲಿ ಆಶಾ ಕಾರ್ಯಕರ್ತರು ಗ್ರಾಮದಲ್ಲಿನ ಮನೆಮನೆಗೆ ತೆರಳಿ, ನೀರಿನಿಂದ ಹರಡಬಹುದಾದ ಡೆಂಘೀ, ಚಿಕೂನ್ಗುನ್ಯ, ಮಲೇರಿಯಾ, ಸಿತಾಳೆ, ಜಾಂಡಿಸ್, ಕರುಳುಬೇನೆ, ದಡಾರ ಸೇರಿದಂತೆ ಇನ್ನಿತರೆ ಸಾಂಕ್ರಾಮಿಕ ರೋಗಗಳು ಬಾರದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತ ಕರಪತ್ರ ಹಂಚಿ ಜಾಗೃತಿ ಮೂಡಿಸಿದರು.
ಆಶಾ ಕಾರ್ಯಕರ್ತೆಯರಾದ ರೂಪಾ, ಶೋಭಾ, ಸರೋಜಾ ಗ್ರಾಮದ ಮುಖಂಡರಾದ ರವಿ, ಗಂಗಾಧರ, ಸಿದ್ದಯ್ಯ ಇದ್ದರು.
ಸೌಭಾಗ್ಯ, ರೇಣುಕಾ, ಚನ್ನಜಮ್ಮ, ಸುಜಾತ, ಲತಾ, ಸುಮತಿ ಅವರು ಹೊಸೂರು, ಹಳಿಯೂರು ಬಡಾವಣೆ, ಸಾಲೆಕೊಪ್ಪಲು, ದಿಡ್ಡಹಳ್ಳಿ, ಜವರೇಗೌಡನಕೊಪ್ಪಲು ಗ್ರಾಮಗಳಲ್ಲಿ ತೆರಳಿ ಜಾಗೃತಿ ಅಭಿಯಾನ ಕೈಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

