ಮೈಸೂರು

ವೃತ್ತಿಪರ ಕೋರ್ಸ್‌ಗೆ ಪ್ರವೇಶ ಆರಂಭ

Published On :

ಮೈಸೂರು: ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಕಂಪ್ಯೂಟರ್ ತಂತ್ರಾಂಶ ಅಭಿವೃದ್ಧಿ ಮತ್ತು ಆಹಾರ ಸಂಸ್ಕರಣ ವಿಷಯಗಳಲ್ಲಿ ವೃತ್ತಿಪರ ಪದವಿ ಕೋರ್ಸುಗಳಿಗೆ ಪ್ರವೇಶ ಆರಂಭಿಸಲಾಗಿದೆ. ಮೂರು ವರ್ಷಗಳ ಈ ವಿಶೇಷ ಕೋರ್ಸುಗಳಲ್ಲಿ ಕೈಗಾರಿಕೆಗಳೊಡನೆ ಚರ್ಚಿಸಿ ಅವರ ಅವಶ್ಯಕತೆಗಳನ್ನು ಅಳವಡಿಸಿಕೊಂಡು ಪ್ರಯೋಗಾಲಯ ಮತ್ತು ಕೈಗಾರಿಕೆಗಳಲ್ಲಿ ಪ್ರಾತ್ಯಕ್ಷಿಕೆಗಳಿಗೆ ಹೆಚ್ಚು ಒತ್ತು ನೀಡಿ ಪಠ್ಯಕ್ರಮ ರೂಪಿಸಲಾಗಿದೆ ಎಂದು ಪ್ರಾಂಶುಪಾಲ ಪ್ರೊ.ಎಂ.ಬಿ. ಮಲ್ಲಿಕಾರ್ಜುನ ಪಂಡಿತ್ ತಿಳಿಸಿದ್ದಾರೆ. ಈ ಸಂಬಂಧ ನಗರದಲ್ಲಿರುವ ಸಾಫ್ಟ್‌ವೇರ್ ಕಂಪನಿ, ಎಕ್ಸೆಲ್ ಸಾಫ್ಟ್, ಆಹಾರ ಸಂಸ್ಕರಣೆಯಲ್ಲಿ ಹೆಸರು ಮಾಡಿರುವ ಬಹುರಾಷ್ಟ್ರೀಯ ಕಂಪನಿಗಳಾದ ಹಿಂದೂಸ್ತಾನ ಯುನಿಲಿವರ್ ಲಿ. ನೆಸ್ಲೆ ಇಂಡಿಯಾ ಲಿ. ಕಂಪನಿಗಳಲ್ಲಿ ಶೈಕ್ಷಣಿಕ ಮತ್ತು ಕೌಶಲ ತರಬೇತಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಮೊ. 96866 77240 ಸಂಪರ್ಕಿಸಬಹುದು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.