ಹಬ್ಬ ಆಚರಣೆಯಿಂದ ಗ್ರಾಮದಲ್ಲಿ ನೆಮ್ಮದಿ ಸಾಧ್ಯ
ಕೆ.ಆರ್. ನಗರ: ಕಠಿಣವಾದ ಕಾನೂನುಗಳಿಗೂ ಭಯಪಡದ ಜನರು ದೇವರಿಗೆ ಭಯಪಡುತ್ತಿದ್ದು, ಇದರಿಂದ ದೇವಸ್ಥಾನಗಳು ಎಲ್ಲ ಗ್ರಾಮಗಲ್ಲೂ ನಿರ್ಮಾಣವಾಗಬೇಕು ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ತಾಲೂಕಿನ ಕಂಚಿನಕೆರೆ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡ ಆದಿಶಕ್ತಿ ತಿರ್ಲಾಪುರದಮ್ಮ ದೇವಾಲಯದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮಗಳಲ್ಲಿ ದೇವರ ಹೆಸರಿನಲ್ಲಿ ಎಲ್ಲರೂ ಒಂದೆಡೆ ಸೇರಿ ಹಬ್ಬ ಆಚರಿಸುವುದರಿಂದ ಗ್ರಾಮದಲ್ಲಿ ಶಾಂತಿ-ನೆಮ್ಮದಿ ನೆಲೆಸಲಿದೆ ಎಂದು ತಿಳಿಸಿದರು. ದೇವಸ್ಥಾನ ಜೀರ್ಣೋದ್ದಾರಕ್ಕೆ 1.50 ಲಕ್ಷ ಅನುದಾನ ನೀಡಲಾಗಿದ್ದು, ದೇವಸ್ಥಾನದ ಮುಂಭಾಗ ಭಕ್ತರಿಗಾಗಿ ವೈಯಕ್ತಿಕವಾಗಿ ಚಾವಣಿ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು. ತಾಲೂಕು ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮೇಗೌಡ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಜೆ. ದ್ವಾರಕೀಶ್, ಸದಸ್ಯೆ ಪುಷ್ಪಲತಾ ರಮೇಶ್, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಕೃಷ್ಣೇಗೌಡ, ಗ್ರಾಪಂ ಅಧ್ಯಕ್ಷೆ ಚಿಕ್ಕಮ್ಮ, ಮಾಜಿ ಅಧ್ಯಕ್ಷ ರೇಣುಕಾಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಲ್.ರಾಜಶೇಖರ್, ಜೆಡಿಎಸ್ ವಕ್ತಾರ ಕೆ.ಎಲ್. ರಮೇಶ್, ಎಪಿಎಂಸಿ ಮಾಜಿ ನಿರ್ದೇಶಕ ರಾಜಶೇಖರ್, ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ಕೆ.ಪಿ. ಯೋಗೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

