ಮೈಸೂರು

ನರೇಂದ್ರ ಮೋದಿ ಅಲೆ ಸಿದ್ದು ಮನೆ ಮುಂದಿದೆ

Published On :

ಮೈಸೂರು: ಮೋದಿಯ ಅಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯ ಮುಂದೆ ಬಂದು ನಿಂತಿದೆ. ಈಗ ಸಿದ್ದರಾಮಯ್ಯ ಅವರು ಸೋಲಿನ ನೈತಿಕತೆ ಹೊತ್ತು ರಾಜಿನಾಮೆ ನೀಡಲಿ ಎಂದು ಬಿಜೆಪಿ ಮುಖಂಡರಾದ ಮಾಜಿ ಸಚಿವ ಎಸ್.ಎ.ರಾಮದಾಸ್ ಆಗ್ರಹಿಸಿದರು. ನಗರದ ಎಸ್‌ಜೆಸಿಇ ಮೈದಾನದಲ್ಲಿ ಶುಕ್ರವಾರ ಮತ ಎಣಿಕೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆ ವೇಳೆ ಪಕ್ಷದ ಆಂತರಿಕ ಕಲಹದಿಂದಾಗಿ ಪಕ್ಷಕ್ಕೆ ಹಿನ್ನಡೆ ಆಗಿತ್ತು. ಆದರೆ ಈ ಚುನಾವಣೆ ಕಳೆದ ಚುನಾವಣೆಯ ನೋವನ್ನು ಮರೆಸುವ ಫಲಿತಾಂಶ ತಂದುಕೊಟ್ಟಿದೆ. ರಾಜ್ಯ ಕಾಂಗ್ರೆಸ್‌ನ ಆಡಳಿತ ವೈಫಲ್ಯ ನಮಗೆ ಅನುಕೂಲವಾಗಿದೆ. ಇದು ಬಿಜೆಪಿಗೆ ಸಕಾರಾತ್ಮಕ ಅಲೆ. ಮೋದಿಯ ನಾಯಕತ್ವ, ದೂರದೃಷ್ಟಿಗೆ, ಮತದಾರ ಆದ್ಯತೆ ನೀಡಿದ್ದಾನೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿ ಅಲೆ ಇಲ್ಲ ಎನ್ನುತ್ತಿದ್ದರು. ಈಗ ಮೋದಿ ಅಲೆ ಮುಖ್ಯಮಂತ್ರಿಗಳ ಮನೆ ಬಾಗಿಲಿಗೆ ಬಂದಿದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.