ನೈಸರ್ಗಿಕ ಕೃಷಿಯ ಮಾವಿನ ಮೇಳ ಆರಂಭ ಇಂದಿನಿಂದ
ಮೈಸೂರು: ಕರ್ನಾಟಕ ರಾಜ್ಯ ನೈಸರ್ಗಿಕ ಕೃಷಿ ಆಂದೋಲನ ವೇದಿಕೆಯು ಮೇ 18 ರಿಂದ ನಗರದ ಜಯಲಕ್ಷ್ಮೀಪುರಂನಲ್ಲಿರುವ ಹಸಿರು ಆವರಣದಲ್ಲಿ ನೈಸರ್ಗಿಕ ಕೃಷಿಯ ಮಾವಿನ ಮೇಳ ಏರ್ಪಡಿಸಿದೆ. ಅಂದು ಬೆಳಗ್ಗೆ 11ಕ್ಕೆ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಹಿ.ಚಿ. ಬೋರಲಿಂಗಯ್ಯ ಉದ್ಘಾಟಿಸಲಿದ್ದು, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಪಿಚ್ಚಳ್ಳಿ ಶ್ರೀನಿವಾಸ್, ಪ್ರಾಧ್ಯಾಪಕ ಡಾ.ಎಂ.ಬಿ. ರಾಮಮೂರ್ತಿ, ಮಾವು ಬೆಳೆಗಾರರಾದ ಸೈಯ್ಯದ್ ಘನಿ ಖಾನ್, ಎಂ.ಎಸ್. ಸೋಮೇಶ್ ಭಾಗವಹಿಸುವರು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ಕೃಷಿ ಆಂದೋಲನ ವೇದಿಕೆ ಸಂಚಾಲಕ ಆರ್. ಸ್ವಾಮಿ ಆನಂದ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನೈಸರ್ಗಿಕವಾಗಿ ಬೆಳೆದ ಮಾವಿನ ಫಸಲನ್ನು ಸಹಜ ಮತ್ತು ನೈಸರ್ಗಿಕ ವಿಧಾನಗಳಿಂದ ಹಣ್ಣು ಮಾಡಲಾಗಿರುತ್ತದೆ. ವಿಷಮುಕ್ತ ಹಣ್ಣುಗಳನ್ನು ಸವಿಯುವ ಅವಕಾಶವನ್ನು ಗ್ರಾಹಕರು ಬಳಸಿಕೊಳ್ಳುವಂತೆ ಅವರು ಕೋರಿದರು. ದೂ. 0821- 2410210, ಮೊ. 94484 72748 ಸಂಪರ್ಕಿಸಬಹುದು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

