ವಸ್ತುಸಂಗ್ರಹಾಲಯ ಸ್ಥಾಪನೆಗೆ ಬಂದ ಬೇಡಿಕೆ
ಕ.ಪ್ರ.ವಾರ್ತೆ ಮೈಸೂರು ಮೇ 19
ಇತ್ತೀಚಿನ ದಿನಗಳಲ್ಲಿ ವಸ್ತುಸಂಗ್ರಹಾಲಯ ಮಹತ್ವದ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡುತ್ತಿದ್ದು ರಾಜ್ಯದ ವಿವಿಧ ಸಂಸ್ಥೆಗಳು ವಸ್ತು ಸಂಗ್ರಹಾಲಯಗಳ ಸ್ಥಾಪನೆಗೆ ಇಲಾಖೆಗೆ ಅರ್ಜಿ ಸಲ್ಲಿಸಿವೆ ಎಂದು ಪ್ರಾಚ್ಯವಸ್ತು ಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆ ಆಯುಕ್ತ ಡಾ.ಸಿ.ಜಿ. ಬೆಟ್ಸೂರ್ ಮಠ ಹೇಳಿದರು.
ನಗರದ ಪ್ರಾಚ್ಯವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯು ಸೋಮವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆಯಲ್ಲಿ ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಈಗಾಗಲೇ ಬೆಂಗಳೂರು- ಕನಕಪುರ ರಸ್ತೆಯ ತಾತುನಿ ಎಸ್ಟೇಟ್ನಲ್ಲಿ ಮತ್ತಿ ದೇವಿಕಾರಾಣಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ನೀಲನಕ್ಷೆ ತಯಾರಿಸಿದ್ದು, ಸ್ಥಳ ಪರಿಶೀಲನೆ ಪ್ರಕ್ರಿಯೆ ಮುಗಿದಿದೆ. ಸದ್ಯದಲ್ಲಿಯೇ ಅದು ನಿರ್ಮಾಣಗೊಳ್ಳಲಿದೆ ಎಂದರು.
ಇದಲ್ಲದೆ ಸುತ್ತೂರು, ಕನಕಗಿರಿ, ಧಾರವಾಡಗಳಿಂದ ವಸ್ತುಸಂಗ್ರಹಾಲಯ ನಿರ್ಮಾಣಕ್ಕೆ ಅರ್ಜಿ ಬಂದಿವೆ. ಜಗತ್ತಿನಾದ್ಯಂತ 143 ದೇಶಗಲ್ಲಿ 35 ಸಾವಿರಕ್ಕೂ ಅಧಿಕ ವಸ್ತುಸಂಗ್ರಹಾಲಯಗಳಿವೆ. ರಾಜ್ಯದಲ್ಲಿ 15 ವಸ್ತುಸಂಗ್ರಹಾಲಯಗಳಿವೆ. ಸಂಗ್ರಹಾಲಯಗಳು ಪ್ರವಾಸಿಗರಿಗೆ, ನಮ್ಮ ಯುವ ಪೀಳಿಗೆಗೆ ದೇಶದ ಸಂಸ್ಕೃತಿ ಬಗ್ಗೆ ತಿಳಿಸುತ್ತದೆ. ಸಂಸ್ಕೃತಿ, ಸಾಹಿತ್ಯದ ಬಗ್ಗೆ ಪರಿಚಯಾತ್ಮಕ ವಿಚಾರ ತಿಳಿಯುತ್ತದೆ. ಈ ಬಗ್ಗೆ ಇನ್ನಷ್ಟು ದೊಡ್ಡ ಮಟ್ಟದಲ್ಲಿ ಅರಿವು ಮೂಡಿಸಬೇಕಾಗಿದೆ ಎಂದು ತಿಳಿಸಿದರು.
ಪತ್ರಗಾರ ಇಲಾಖೆ ಉಪ ನಿರ್ದೇಶಕ ಗವಿಸಿದ್ಧಯ್ಯ ಮಾತನಾಡಿ, ಪ್ರಾಚ್ಯವಸ್ತು ಸಂಗ್ರಹಾಲಯ ಕ್ಷೇತ್ರದಲ್ಲಿ ಸಂಶೋಧನೆ ನಡೆಸಲು ಹಲವು ವಿಚಾರಗಳಿವೆ. ಪತ್ರಗಾರ ಇಲಾಖೆಯೊಂದರಲ್ಲೇ ದಸರಾಗೆ ಸಂಬಂಧಪಟ್ಟದ ಪತ್ರಗಳಿವೆ. ಈ ನಿಟ್ಟಿನಲ್ಲಿ ಮತ್ತಷ್ಟು ಸಂಶೋಧನೆ ನಡೆಸಲು ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಲು ನಮ್ಮ ಇಲಾಖೆ ಪ್ರಯತ್ನಿಸಲಿದೆ ಎಂದು ಹೇಳಿದರು.
ಪತ್ರಗಾರ ಇಲಾಖೆಯ ನಿವೃತ್ತ ಉಪನಿರ್ದೇಶಕಿ ಗಾಯಿತ್ರಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

