ಆಯ್ಕೆ ವೇಳೆ ಆಸಕ್ತಿ ಅಗತ್ಯ
ಮೈಸೂರು: ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್ ಆಯ್ಕೆ ಮಾಡುವಾಗ ತಮ್ಮ ಆಸಕ್ತಿಗೆ ಅನುಗುಣವಾಗಿ ಆಯ್ಕೆ ಮಾಡಿಕೊಳ್ಳಬೇಕು. ಈ ವಿಷಯದಲ್ಲಿ ಪಾಲಕರೂ ಜಾಗ್ರತೆಯಿಂದ ನಿರ್ಧಾರ ತೆಗೆದುಕೊಳ್ಳಬೇಕೆಂದು ಬೆಂಗಳೂರಿನ ನಾಗಾರ್ಜುನ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ಮುಖ್ಯಸ್ಥ ಬಿ.ಎನ್.ಅವಿನಾಶ್ ಅಭಿಪ್ರಾಯಪಟ್ಟರು.
ನಗರದ ಬನುಮಯ್ಯ ಕಾಲೇಜಿನಲ್ಲಿ ಮೈಸೂರಿನ ಮೋಟಿವೇಟಿಂಗ್ ಮಾಸ್ಟರ್ ತಂಡ ಹಾಗೂ ಬೆಂಗಳೂರಿನ ನಾಗಾರ್ಜುನ ಕಾಲೇಜ್ ಆಫ್ ಎಂಜಿನಿಯರಿಂಗ್ಗಳ ಜಂಟಿ ಸಹಯೋಗದಲ್ಲಿ ನಡೆದ ಪಿಯುಸಿ ದ್ವಿತೀಯ ವಿಜ್ಞಾನ ನಂತರ ಮುಂದೇನು ಎಂಬ ಮೂರು ಗಂಟೆಗಳ ವಿಶಿಷ್ಟ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಎಂಜಿನಿಯರಿಂಗ್ ಕೋರ್ಸ್ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು.
ಮೂರು ಗಂಟೆಗಳ ಕಾಲ ನಡೆದ ಉಚಿತ ವಿಚಾರ ಸಂಕಿರಣದಲ್ಲಿ ನಾಗಾರ್ಜುನ ಎಂಜಿನಿಯರಿಂಗ್ ಕಾಲೇಜಿನ ಆಡಳಿತಾಧಿಕಾರಿ ಎಂ.ಶ್ರೀನಿವಾಸರಾವ್, ಮೋಟಿವೆಟಿಂಗ್ ಮಾಸ್ಟರ್ಸ್ನ ಸಂಸ್ಥಾಪಕ ನಿರ್ದೇಶಕ ಡಿ.ಮುರಳಿ, ಸಂಪನ್ಮೂಲ ವ್ಯಕ್ತಿಗಳಾದ ನವಿಲೂರು, ಪ್ರಕಾಶ್, ಡಾ.ಗುರುಬಸವರಾಜ್, ಪ್ರವೀಣ್, ಆರ್.ಎನ್.ದೀಪಕ್, ಎಂ.ಎಸ್. ಅರವಿಂದ್ ಇದ್ದರು. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರೊಂದಿಗೆ ಸಂವಾದ ನಡೆಸಿದರು. ಅವರ ಸಂದೇಹಗಳಿಗೆ ಪರಿಹಾರ ಸೂಚಿಸಿದರು.
ಜಾನಪದ ತರಬೇತಿ
ಮೈಸೂರು: ಕರ್ನಾಟಕ ಜಾನಪದ ಅಕಾಡೆಮಿ ಗುರುಶಿಷ್ಯ ಪರಂಪರೆ ವಿಶೇಷ ಘಟಕ ಯೋಜನೆಯಡಿ ಪ.ಜಾತಿ ಅಭ್ಯರ್ಥಿಗಳಿಗೆ ಹಾಗೂ ಗಿರಿಜನ ಯೋಜನೆಯಡಿ ಪ.ಪಂಗಡ ಅಭ್ಯರ್ಥಿಗಳಿಗೆ ವಿವಿಧ ಕಲಾಪ್ರಕಾರಗಳಲ್ಲಿ ತರಬೇತಿ ನೀಡಲು ಗುರುಗಳಿಂದ ಅರ್ಜಿ ಆಹ್ವಾನಿಸಿದೆ. ಗುರುಗಳು ವಾಲಗ, ತಮಟೆ, ಚೌಡಿಕೆ, ಲಂಬಾಣಿ ವ್ಯಾದಗಳು ನಗಾರಿ, ಚಿಟ್ಮೇಳ, ಗಣೇವಾದ್ಯ, ತತ್ವಪದ, ಜಗ್ಗಲಿಗೆ, ನೀಲಗಾರರ ಪದ (ಮಂಟೇಸ್ವಾಮಿ) ಹಾಗೂ ಶಹನಾಯಿ ಜನಪದ ಶೈಲಿ ಕಲಾಪ್ರಕಾರಗಳಲ್ಲಿ ತರಬೇತಿ ನೀಡಬೇಕಿದೆ. ಆಸಕ್ತರು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಕನ್ನಡಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇಲ್ಲಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಮೇ 31ರೊಳಗಾಗಿ ಸಲ್ಲಿಸುವುದು. ದೂ. 080-22215509 ಸಂಪರ್ಕಿಸಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

