ಮೈಸೂರು

ಎಸ್‌ಐ ಜಗದೀಶ್ ಸೇರಿ ಮೂವರ ಸೆರೆ

Published On :

ಕ.ಪ್ರ. ವಾರ್ತೆ ಮೈಸೂರು  ಮೇ 21
ಕೇರಳಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ನಿಂದ 2.27 ಕೋಟಿ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐ ಜಗದೀಶ್ ಸೇರಿದಂತೆ ಮೂವರನ್ನು ಸಿಐಡಿ ಪೊಲೀಸರು ಮಂಗಳವಾರ ರಾತ್ರಿ ಮಂಗಳೂರಿನಲ್ಲಿ ಬಂಧಿಸಿದ್ದಾರೆ.
ಮೈಸೂರು ದಕ್ಷಿಣ ಠಾಣೆಯಲ್ಲಿ ಎಸ್‌ಐ ಆಗಿದ್ದ ಜಗದೀಶ್, ಪೇದೆಗಳಾದ ಮನೋಹರ ಮತ್ತು ರವಿ ಬಂಧಿತರು. ಸಿಐಡಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಮಂಗಳೂರಿನ ಹೊಟೇಲ್ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂವರನ್ನು ಸಿಐಡಿ ಪೊಲೀಸರು ನ್ಯಾಯಾಧೀಶರ ಎದುರು ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಇಲವಾಲ ಬಳಿ ಖಾಸಗಿ ಬಸ್‌ನಿಂದ 2.27 ಕೋಟಿ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಐ ಜಗದೀಶ್, ಪೇದೆಗಳಾದ ಮನೋಹರ, ರವಿ, ಸತೀಶ್, ಅಬ್ದುಲ್ ಲತೀಫ್, ಅಶೋಕ್, ಮಾಹಿತಿದಾರರಾದ ಸಲೀಂ, ಶರೀಫ್, ಮುಸ್ತಾಕ್ ಹಾಗೂ ದಕ್ಷಿಣ ವಲಯ ಐಜಿಪಿ ಗನ್‌ಮ್ಯಾನ್ ಆಗಿದ್ದ ಪ್ರಕಾಶ ಬಂಧಿತರು.
ಏನಿದು ಪ್ರಕರಣ?: ಮೈಸೂರು ತಾಲೂಕಿನ ಇಲವಾಲ ಠಾಣೆ ವ್ಯಾಪ್ತಿಯಲ್ಲಿ ಜ.4ರ ಬೆಳಗಿನ ಜಾವ ಖಾಸಗಿ ಬಸ್ ಮೇಲೆ ದಾಳಿ ಮಾಡಿ 2.27 ಕೋಟಿ ವಶಪಡಿಸಿಕೊಂಡು, 20 ಲಕ್ಷ ಮಾತ್ರ ಸಿಕ್ಕಿರುವುದಾಗಿ ಎಸ್‌ಐ ಜಗದೀಶ್ ಮತ್ತು ಸಿಬ್ಬಂದಿ ಪ್ರಕರಣ ದಾಖಲಿಸಿದ್ದರು.
ಹಣ ತಮ್ಮದೆಂದು ಹೇಳಿಕೊಂಡು ಮೂವರು ಚಿನ್ನದ ವ್ಯಾಪಾರಿಗಳು ದೂರು ನೀಡಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಪೊಲೀಸರ ಮೇಲಿನ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಎಸ್‌ಐ ಸೇರಿದಂತೆ 6 ಮಂದಿಯನ್ನು ಅಮಾನತುಗೊಳಿಸಲಾಗಿತ್ತು.
ಬಳಿಕ ಈ ಪ್ರಕರಣದ ತನಿಖೆ ಕೈಗೊಂಡ ಸಿಐಡಿ ಪೊಲೀಸರು, ಆರೋಪಿತ ಎಲ್ಲ ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.