ಅಕ್ರಮ ಮರಳು ತಡೆಗೆ ವಿಫಲ: ಪ್ರತಿಭಟನೆ
ಬೈಲಕುಪ್ಪೆ: ಕಾವೇರಿ ದಡದಲ್ಲಿ ಅಕ್ರಮ ಮರಳು ಸಾಗಾಣಿಕೆಯನ್ನು ತಡೆಯುವಲ್ಲಿ ವಿಫಲವಾಗಿರುವ ತಾಲೂಕು ಆಡಳಿತದ ವಿರುದ್ಧ ಚಾಮರಾಯನಕೋಟೆಯ ದಸಂಸ ಜಿಲ್ಲಾ ಸಂಚಾಲಕ ಸಿ.ಎಸ್. ಜಗದೀಶ್ ನೇತೃತ್ವದಲ್ಲಿ ಕಾರ್ಯಕರ್ತರು ಬುಧವಾರ ಪ್ರತಿಭಟಿಸಿದರು.
ತಾಲೂಕಿನ ಚಾಮರಾಯನಕೋಟೆ, ಕಣಗಾಲು, ದೊಡ್ಡಕಮರವಳ್ಳಿ, ಸೂಳೇಕೋಟೆ, ಮುತ್ತಿನ ಮುಳುಸೋಗೆ ಸೇರಿದಂತೆ ಕಾವೇರಿ ನದಿ ತೀರದಲ್ಲಿರುವ ಗ್ರಾಮಗಳಲ್ಲಿ ಅಕ್ರಮ ಮರಳು ಸಾಗಣೆ ನಡೆಯುತ್ತಿದ್ದರು ಸಹ, ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ, ಜಾಣ ಮೌನ ವಹಿಸಿರುವ ಬಗ್ಗೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಒಂದು ವರ್ಷಗಳಿಂದ ಈ ಅಕ್ರಮ ಮರಳು ಸಾಗಣೆ ನಡೆಯುತ್ತಿದ್ದು, ಮೈಸೂರು ಜಿಲ್ಲಾಧಿಕಾರಿಗಳು ಮತ್ತು ತಾಲೂಕು ಕಂದಾಯ, ಪೊಲೀಸ್, ಲೋಕೋಪಯೋಗಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರೂ, ಆಸೆ ಆಮಿಷಗಳಿಗೆ ಬಲಿಯಾಗಿ ಈ ಅಕ್ರಮ ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿದರು.
ದಸಂಸ ಕಾರ್ಯಕರ್ತರು ಬುಧವಾರ ಬೆಳಗ್ಗೆ ಬೀದಿಗಿಳಿದು ಲಾರಿಗಳನ್ನು ತಡೆದು ಮರಳು ಸಾಗಣೆಯನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಪ್ರತಿಭಟಿಸಿದರು. ಸ್ಥಳಕ್ಕೆ ಆಗಮಿಸಿದ ಬೆಟ್ಟದಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಮರಳು ತುಂಬಿದ ಲಾರಿಯನ್ನು ವಶಪಡಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಹಾರಂಗಿ ನೀರು ಬಳಕೆದಾರರ ಸಂಘದ ಅಧ್ಯಕ್ಷ ಪರಮೇಶ್ ಹಾಗೂ ಚಾಮರಾಯನಕೋಟೆ ಗ್ರಾಮಸ್ಥರಾದ ನಾಗರಾಜು, ವೆಂಕಟೇಶ್, ಉಮೇಶ್, ಅಶೋಕ, ಹನುಮರಾಜು, ರಾಜಣ್ಣ, ಜವರಯ್ಯ, ವಿಜಯ್, ರೈತೇಶ್, ನಟರಾಜು, ಕುಮಾರ್, ಮಂಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

