ಮೈಸೂರು

ವಿಶ್ವನಾಥ್ಗೆ ಸೂಕ್ತ ಸ್ಥಾನ ನೀಡಿ: ಬೆಂಬಲಿಗರ ಆಗ್ರಹ

Published On :

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಪರಾಜಿತರಾದ ಹಿರಿಯ ರಾಜಕಾರಣಿ ಮತ್ತು ಮಾಜಿ ಸಂಸದ ಎಚ್.ವಿಶ್ವನಾಥ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಕ್ತ ಸ್ಥಾನಮಾನ ನೀಡಬೇಕು ಎಂದು ವಿಶ್ವನಾಥ್ ಅಭಿಮಾನಿಗಳು ಆಗ್ರಹಿಸಿದರು.
ನಗರದ ಎಂಜಿನಿಯರ್ಗಳ ಸಂಸ್ಥೆಯಲ್ಲಿ ಬುಧವಾರ ವಿಶ್ವನಾಥ್ ಅಭಿಮಾನಿಗಳು ಆಯೋಜಿಸಿದ್ದ ಸಮಾನ ಮನಸ್ಕರ ಸಭೆಯಲ್ಲಿ ಈ ತೀರ್ಮಾನ ಕೈಗೊಂಡ ಅಭಿಮಾನಿಗಳು ಮೇ 22ರ ಬೆಳಗ್ಗೆ 9ಕ್ಕೆ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಯಮ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ತೀರ್ಮಾನಿಸಿದರು.
ಸಭೆಯಲ್ಲಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಎಚ್.ಎ.ವೆಂಕಟೇಶ್ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರರ ಅಭಿಪ್ರಾಯ ಗೌರವಿಸಬೇಕು. ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ನಮಗಿತ್ತು. ಏಕೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನೇಕ ಜನಪರ ಕಾರ್ಯಗಳನ್ನು ಜಾರಿಗೆ ತಂದಿದ್ದರು. ಆದರೆ ಬಡವರ ಪರ ಕೆಲಸ ಮಾಡುವುದು ಕೆಲವರಿಗೆ ಇಷ್ಟವಾಗಿಲ್ಲ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ರೂಪಿಸಿದ್ದರಿಂದ ಕಾಂಗ್ರೆಸ್ಗೆ ಸೋಲಾಗಿದೆ ಎಂದರು.
ಸಿಎಂಗೆ ಬಿಟ್ಟ ವಿಚಾರ: ಎಚ್.ವಿಶ್ವನಾಥ್ ಅವರಿಗೆ 40 ವರ್ಷಗಳ ರಾಜಕೀಯ ಅನುಭವ ಇದೆ. ಹಿರಿಯರಾದ ಅವರಿಗೆ ರಾಜಕೀಯವಾಗಿ ಉತ್ತಮ ಸ್ಥಾನಮಾನ ಕಲ್ಪಿಸಬೇಕು. ವಿಶ್ವನಾಥ್ ಅವರಿಗೆ ಯಾವ ಸ್ಥಾನ ನೀಡಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ಹೇಳಿದರು.
ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್ ಮಾತನಾಡಿ, ಈ ಬಾರಿಯ ಚುನಾವಣಾ ಫಲಿತಾಂಶದಿಂದ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ಈ ಫಲಿತಾಂಶ ಆಘಾತಕಾರಿಯಾಗಿದೆ. ವಿಶ್ವನಾಥ್ ಅವರು ಸಕ್ರಿಯರಾಗಿರಬೇಕು. ಜನರ ಮಧ್ಯೆ ಇರಬೇಕು. ಆದ್ದರಿಂದ ಮುಖ್ಯಮಂತ್ರಿಗಳು ಅವರಿಗೆ ಸೂಕ್ತ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಸಭೆಯಲ್ಲಿ ಮಾಜಿ ಮೇಯರ್ ಟಿ.ಬಿ.ಚಿಕ್ಕಣ್ಣ, ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು, ಡಿ.ಸಿ.ಕಾಂತರಾಜು, ಪಿ.ರಾಜು, ಶಶಿಧರ, ನಿವೃತ್ತ ಎಂಜಿನಿಯರ್ ನಾಗರಾಜು ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.