ಮೈಸೂರು

ಹೊಸಹುಂಡಿಯಲ್ಲಿ ಶಾಲಾ ದಾಖಲು ಜಾಥಾ

Published On :

ಕ.ಪ್ರ.ವಾರ್ತೆ ್ಣ ಮೈಸೂರು ್ಣ ಮೇ 22
ತಾಲೂಕಿನ ಉತ್ತನಹಳ್ಳಿ ಕ್ಲಸ್ಟರ್ ಸಂಪನ್ಮೂಲ ಕೇಂದ್ರದ ಹೊಸಹುಂಡಿ ಗ್ರಾಮದಲ್ಲಿ ಗುರುವಾರ ಶಾಲಾ ದಾಖಲಾತಿ ಜಾಥಾ ನಡೆಸಲಾಯಿತು.
ಜಾಥಾ ಅಂಗವಾಗಿ ವಿವಿಧ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಮಕ್ಕಳೊಂದಿಗೆ ಮನೆ ಮನೆಗೆ ತೆರಳಿ ಸರ್ಕಾರಿ ಶಾಲೆಗಳಲ್ಲಿನ ಉಚಿತ ಸೌಲಭ್ಯಗಳಾದ ಪಠ್ಯ ಪುಸ್ತಕ, ಸಮವಸ್ತ್ರ, ಬ್ಯಾಗ್ ವಿತರಣೆ, ನೋಟ್ ಪುಸ್ತಕ, ಲೇಖನ ಸಾಮಗ್ರಿ, ವಿದ್ಯಾರ್ಥಿ ವೇತನ, ಹೆಣ್ಣು ಮಕ್ಕಳಿಗೆ ವಿಶೇಷ ಜಾಗೃತಿ ಶಿಬಿರ, ಅಗತ್ಯ ಕ್ರೀಡಾ ಸೌಲಭ್ಯ ಮತ್ತು ಪಾಠೋಪಕರಣ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಬೇತಿಗಳು, ಅಂಗವಿಕಲ ಮಕ್ಕಳಿಗೆ ಗೃಹಾಧಾರಿತ ಶಿಕ್ಷಣದ ಜೊತೆಗೆ ವಿಶೇಷ ಸೌಲಭ್ಯಗಳು, ಶುದ್ಧೀಕರಿಸಿದ ಕುಡಿಯುವ ನೀರು, ಉತ್ತಮ ಗ್ರಂಥಾಲಯ, 1ನೇ ತರಗತಿಯಿಂದಲೆ ಇಂಗ್ಲಿಷ್ ವಿಷಯ ಪಾಠ ಬೋಧನೆ, ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಪ್ರತಿಭಾ ಕಾರಂಜಿ, ಕಲಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಾರ್ವಜನಿಕರಿಗೆ ತಿಳಿಸಲಾಯಿತು.
ಇದರ ಜೊತೆಗೆ ಮಕ್ಕಳಿಗೆ ಶುಚಿಯಾದ ಬಿಸಿಯೂಟ, ಕ್ಷೀರಭಾಗ್ಯ, ಕಂಪ್ಯೂಟರ್ ಶಿಕ್ಷಣ, 1ನೇ ತರಗತಿ ಹೆಣ್ಣು ಮಕ್ಕಳಿಗೆ ದಿನಕ್ಕೆ 2 ರಂತೆ ವಿಶೇಷ ಹಾಜರಾತಿ ಪ್ರೋತ್ಸಾಹಧನ, 8ನೇ ತರಗತಿ ಮಕ್ಕಳಿಗೆ ಸೈಕಲ್ ವಿತರಿಸುವುದಾಗಿ ತಿಳಿಸಿದರು. ಇದೆ ವೇಳೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಾರ್ವಜನಿಕರ ಮನವೊಲಿಸಿ ಖಾಸಗಿ ಶಾಲೆಗೆ ಹೋಗುತ್ತಿದ್ದ 15 ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲಾಯಿತು.
ಬಿಇಒ ರಾಮಾರಾಧ್ಯ ಮಾತನಾಡಿ, ಜನಪ್ರತಿನಿಧಿಗಳು, ಎಸ್‌ಡಿಎಂಸಿ, ಸಮುದಾಯ, ದಾನಿಗಳ ನೆರವಿನಿಂದ ಈ ಶಾಲೆಯನ್ನು ಮಾದರಿ ಶಾಲೆಯಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ. ಈ ಶೈಕ್ಷಣಿಕ ವರ್ಷವನ್ನು ಗುಣವರ್ಧನ ವರ್ಷವನ್ನಾಗಿ ಆಚರಿಸಲಾಗುತ್ತಿದೆ. ಶೈಕ್ಷಣಿಕ ಮೇಲ್ವಿಚಾರಣೆ, ಅನುಪಾಲನೆ ಮತ್ತು ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
ತಾಪಂ ಸದಸ್ಯರಾದ ಮಂಜುಳಾ ಮಂಜುನಾಥ್, ಗ್ರಾಪಂ ಸದಸ್ಯರಾದ ಭಾಸ್ಕರ್, ಎಸ್‌ಡಿಎಂಸಿ ಅಧ್ಯಕ್ಷ ರಾಜಣ್ಣ. ನೋಡಲ್ ಅಧಿಕಾರಿ ಹಾಗೂ ಡಯಟ್‌ನ ಹಿರಿಯ ಉಪನ್ಯಾಸಕ ರಾಜು, ಬಿಆರ್‌ಸಿ ಮಹದೇವ, ಬಿಆರ್‌ಪಿ ಸುರೇಶ್, ಸಿಆರ್‌ಪಿ ಹೇಮಣ್ಣ, ಜಿಲ್ಲಾ ಮುಖ್ಯೋಪಾಧ್ಯಾಯರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಮೋಹನ್, ಮುಖ್ಯ ಶಿಕ್ಷಕ ಸ್ವಾಮಿಕುಮಾರ್ ಮತ್ತು ಸಿಬ್ಬಂದಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.