ಅಂಬೇಡ್ಕರ್ ಚಿಂತನೆ ನಡೆಯಬೇಕು
ಕ.ಪ್ರ.ವಾರ್ತೆ ್ಣ ಮೈಸೂರು ್ಣ ಮೇ 23
ಡಾ.ಬಿ.ಆರ್. ಅಂಬೇಡ್ಕರ್ ಅವರಂತೆ ಜಾಗೃತರಾಗಲೂ ನಮ್ಮಿಂದ ಅಸಾಧ್ಯ. ಕನಿಷ್ಠ ಅವರ ಚಿಂತನೆಗಳನ್ನು ಅರ್ಥ ಮಾಡಿಕೊಂಡು ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನ ಮಾಡಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಂಗೀತ ವಿವಿ ಆವರಣದಲ್ಲಿ ವಿಶ್ವಮೈತ್ರಿ ಬುದ್ಧ ವಿಹಾರ ಆಯೋಜಿಸಿದ್ದ ಭಗವಾನ್ ಬುದ್ಧರ 2578ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಾತಿ ವ್ಯವಸ್ಥೆ, ಸಾಮಾಜಿಕ ಶೋಷಣೆ ಹಾಗೂ ಅನ್ಯಾಯಕ್ಕೆ ಒಳಗಾದ ಎಲ್ಲರೂ ಸ್ವಾಭಿಮಾನದಿಂದ ಬದುಕುವ ಹಾಗೂ ಮಾನವೀಯತೆಯ ನೆಲೆ ಇರುವ ವ್ಯವಸ್ಥೆಗೆ ನಾವು ವಾಲಬೇಕು. ಈ ಸಂದರ್ಭದಲ್ಲಿ ಶೋಷಿತರು ಜಾಗೃತರಾಗಬೇಕು. ಆದರೆ ಅಂಬೇಡ್ಕರ್ ಅವರಂತೆ ಸಾಧ್ಯವಿಲ್ಲದಿದ್ದರೂ ಅವರ ಚಿಂತನೆಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್, ವಿಶ್ವಮೈತ್ರಿ ಬುದ್ಧ ವಿಹಾರದ ವೀರಶೀಲ ಬಂತೇಜಿ, ಕೊಳ್ಳೇಗಾಲದ ಜೀತವನ ಬುದ್ಧ ವಿಹಾರದ ಮನೋರಖ್ಖಿತ ಬಂತೇಜಿ ಮಾತನಾಡಿದರು.
ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಶಾಸಕ ಎಂ.ಕೆ. ಸೋಮಶೇಖರ್, ಮಾಜಿ ಸಚಿವ ಎಚ್.ಎಂ. ರೇವಣ್ಣ, ಮಾಜಿ ಶಾಸಕ ಡಾ.ಎನ್.ಎಲ್. ಭಾರತಿ ಶಂಕರ್, ಉಪ ಮೇಯರ್ ವಿ. ಶೈಲೇಂದ್ರ, ಕಾಂಗ್ರೆಸ್ ಮುಖಂಡ ಸಿ. ಬಸವೇಗೌಡ, ಸಂಗೀತ ವಿವಿ ಕುಲಪತಿ ಡಾ. ಸರ್ವಮಂಗಳ ಶಂಕರ್, ಕುಲಸಚಿವ ಡಾ.ವೈ.ಎನ್. ಸಿದ್ದೇಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

