ಸಿಡಿಲಿನಿಂದ ಗಾಯಗೊಂಡವರಿಗೆ ಸಾಂತ್ವನ
ಕ.ಪ್ರ.ವಾರ್ತೆ ್ಣ ಹುಣಸೂರು ್ಣ ಮೇ 23
ತಾಲೂಕಿನ ಅರಸು ಕಲ್ಲಹಳ್ಳಿ ಗ್ರಾಮದಲ್ಲಿ ಮಳೆ ಹಾನಿ ಹಾಗೂ ಸಿಡಿಲು ಬಡಿದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುಟುಂಬದವರನ್ನು ನೂತನ ಸಂಸದ ಪ್ರತಾಪ್ ಸಿಂಹ ಭೇಟಿ ಮಾಡಿ ಸಾಂತ್ವನ ಹೇಳಿ, ಸೂಕ್ತ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.
ತಾಲೂಕಿನ ಹನಗೋಡು ಹೋಬಳಿಯ ಅರಸು ಕಲ್ಲಹಳ್ಳಿಯಲ್ಲಿ ಕಳೆದ ಬುಧವಾರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲಿನಿಂದ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದು, ಅವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಂಸದರು ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಸಂಸದರ ಜೊತೆಯಲ್ಲಿದ್ದ ಹನಗೋಡು ಸಹಾಯಕ ತಹಸೀಲ್ದಾರ್ ನರಸಿಂಹಯ್ಯ ಅವರಿಗೆ ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ನೀಡುವಂತೆ ಸೂಚಿಸಿದರು.
ನಂತರ ಹರೀನಹಳ್ಳಿಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಗ್ರೇಡ್ 2 ತಹಸೀಲ್ದಾರ್ ರತ್ನಾಂಬಿಕಾ ಅವರಿಗೆ ಮಳೆಯಿಂದ ಹಾನಿಗೊಳಗಾದ ಮನೆಗಳ ಸ್ಥಿತಿಯನ್ನು ಗಮನಿಸಿ ಕೂಡಲೇ ಎಲ್ಲ ರೀತಿಯ ಆರ್ಥಿಕ ಸಹಾಯವನ್ನು ನೀಡುವಂತೆ ಆದೇಶಿಸಿದರು.
ತಾ. ಬಿಜೆಪಿ ಅಧ್ಯಕ್ಷ ಮಂಜುನಾಥ್, ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ನಾಗರಾಜ ಮಲ್ಲಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ತಾ. ಘಟಕದ ಕಾರ್ಯದರ್ಶಿ ಮಹದೇವಹೆಗ್ಗಡೆ, ರೈತ ಮೋರ್ಚಾ ಅಧ್ಯಕ್ಷ ಬಿ.ಎನ್. ನಾಗರಾಜಪ್ಪ, ಮಾಜಿ ಅಧ್ಯಕ್ಷ ಬಿ.ಎಸ್. ಯೋಗಾನಂದ ಕುಮಾರ್, ಮುಖಂಡರಾದ ಅಣ್ಣಯ್ಯನಾಯ್ಕ, ಚನ್ನವೀರ ಆರಾಧ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

