ಸ್ಮಾರಕ ನಿರ್ಮಿಸಲು ಅವಕಾಶ ನೀಡುವಂತೆ ಪ್ರತಿಭಟನೆ
ಮೈಸೂರು: ನಿರಂಜನ ಮಠ ಮತ್ತು ಎನ್ಟಿಎಂಎಸ್ ಶಾಲಾ ಆವರಣದಲ್ಲಿ ವಿವೇಕಾನಂದರ ಸ್ಮಾರಕ ನಿರ್ಮಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ಸಮಿತಿ ಪದಾಧಿಕಾರಿಗಳು ನಿರಂಜನ ಮಠದ ಬಳಿ ಶನಿವಾರ ಪ್ರತಿಭಟಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ವಿವೇಕಾನಂದರ ಸ್ಮಾರಕ ನಿರ್ಮಾಣ ಸಂಬಂಧ ಈಗಾಗಲೆ ನಿರಂಜನ ಮಠ ಮತ್ತು ಅದಕ್ಕೆ ಹೊಂದಿಕೊಂಡತೆ ಇರುವ ಎನ್ಟಿಎಂಎಸ್ ಶಾಲಾ ಆವರಣವನ್ನು ಶ್ರೀ ರಾಮಕೃಷ್ಣ ಆಶ್ರಮಕ್ಕೆ ಹಸ್ತಾಂತರಿಸಿದೆ. ಆದ್ದರಿಂದ ವಿವೇಕಾನಂದ ಸ್ಮಾರಕ ನಿರ್ಮಾಣಕ್ಕೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಎನ್ಟಿಎಂಎಸ್ ಶಾಲೆಯವರು ತಮ್ಮ ಪೀಠೋಪಕರಣ ತೆರವುಗೊಳಿಸಿ ಮುಂದಿನ ಕೆಲಸಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು.ವಿದ್ಯಾರ್ಥಿಗಳ ಪೋಷಕರು ಯಾವುದೆ ಕಾರಣಕ್ಕೂ ತಮ್ಮ ಮಕ್ಕಳನ್ನು ಎನ್ಟಿಎಂ ಶಾಲೆಗೆ ದಾಖಲಿಸಬಾರದು. ಒಂದು ವೇಳೆ ಬೇರೆಯವರ ಬಲವಂತಕ್ಕೆ ಒಳಗಾಗಿ ದಾಖಲಿಸಿದರೆ ಮಕ್ಕಳ ಭವಿಷ್ಯದಿಂದ ಕಷ್ಟವಾಗುತ್ತದೆ. ಆದ್ದರಿಂದ ಈಗಲೆ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಪ್ರತಿಭಟನೆಯಲ್ಲಿ ಸಾಹಿತಿ ಡಾ. ಸಿಪಿಕೆ, ಬೇಲೂರು ರಾಮಕೃಷ್ಣ ಆಶ್ರಮದ ಸದಸ್ಯ ಎನ್.ಎಸ್. ಚಕ್ರವರ್ತಿ, ವಕೀಲರಾದ ಅರುಣ್ಕುಮಾರ್, ಬಸಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

