ಎನ್ಟಿಎಂ ಶಾಲೆ ಪರ, ವಿರುದ್ಧ ಪ್ರತಿಭಟನೆ
ಕ.ಪ್ರ.ವಾರ್ತೆ ್ಣ ಮೈಸೂರು ್ಣ ಮೇ 27
ಮಹಾರಾಣಿ ಮಾದರಿ ಕನ್ನಡ ಶಾಲೆಯ (ಎನ್ಟಿಎಂಎಸ್) ಜಾಗವನ್ನು ವಿವೇಕ ಸ್ಮಾರಕ ನಿರ್ಮಾಣಕ್ಕೆ ರಾಮಕೃಷ್ಣ ಆಶ್ರಮಕ್ಕೆ ಹಸ್ತಾಂತರಿಸುವ ಸಂಬಂಧ ಪರ ಹಾಗೂ ವಿರುದ್ಧ ಪ್ರತಿಭಟನೆಯು ಸೋಮವಾರ ಸಹ ಮುಂದುವರೆಯಿತು.
ಶಾಲೆ ಜಾಗವನ್ನು ರಾಮಕೃಷ್ಣ ಆಶ್ರಮಕ್ಕೆ ಹಸ್ತಾಂತರಿಸುವ ಸರ್ಕಾರದ ಆದೇಶವನ್ನು ವಿರೋಧಿಸಿ ಕನ್ನಡ ಕ್ರಿಯಾ ಸಮಿತಿ ನಡೆಸುತ್ತಿರುವ ಧರಣಿ ಸತ್ಯಾಗ್ರಹವು 8ನೇ ದಿನವೂ ಮುಂದುವರೆಯಿತು. ಈ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯವರು ಬೆಂಬಲಿಸಿ ಸೂಚಿಸಿದರು.
ಶಾಲೆ ಜಾಗ ಹಸ್ತಾಂತಿರುವ ಹಿಂದಿನ ಸರ್ಕಾರದ ನಿರ್ಧಾರಕ್ಕೆ ಮುಖ್ಯಮಂತ್ರಿಯವರು ಅಂಟಿಕೊಳ್ಳದೆ ಪುನರ್ ಪರಿಶೀಲಿಸಿ ರದ್ದುಗೊಳಿಸಬೇಕು. ಶಾಲೆ ಜಾಗವನ್ನು ರಾಮಕೃಷ್ಣ ಆಶ್ರಮಕ್ಕೆ ವಹಿಸುತ್ತಿರುವುದು ಸರಿಯಲ್ಲ. ವಿವೇಕ ಸ್ಮಾರಕ ನಿರ್ಮಾಣಕ್ಕೆ ಬೇರೆಡೆ ಸರ್ಕಾರ ಜಾಗ ನೀಡಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ, ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜ್, ಮುಖಂಡರಾದ ಎಂ.ಎಸ್. ಅಶ್ವಥನಾರಾಯಣರಾಜೇ ಅರಸ್, ಕೆ.ಎಸ್. ನಂಜುಂಡೇಗೌಡ, ಜಿ.ಟಿ. ರಾಮಸ್ವಾಮಿ, ಬನ್ನೂರು ಕೃಷ್ಣಪ್ಪ, ಕೆ.ಎಂ. ಪುಟ್ಟಸ್ವಾಮಿ, ಸರಗೂರು ನಟರಾಜ್, ಕೆ. ಕೆಂಪೇಗೌಡ, ಕನ್ನಡ ಕ್ರಿಯಾ ಸಮಿತಿಯ ಪ. ಮಲ್ಲೇಶ್, ಸ.ರ. ಸುದರ್ಶನ, ಎಂ.ಬಿ. ವಿಶ್ವನಾಥ್, ಸಂಸ್ಕೃತಿ ಸುಬ್ರಹ್ಮಣ್ಯ, ಕೊ.ಸು. ನರಸಿಂಹಮೂರ್ತಿ ಇದ್ದರು.
ವಿವೇಕ ಸ್ಮಾರಕಕ್ಕೆ ಸಹಕರಿಸಿ: ವಿವೇಕ ಸ್ಮಾರಕ ನಿರ್ಮಾಣಕ್ಕೆ ಆಗ್ರಹಿಸಿ ನಿರಂಜನ ಮಠದ ಬಳಿ ಸಾಹಿತಿಗಳು ಹಾಗೂ ವಿವಿಧ ಸಂಘಟನೆಯವರು ಪ್ರತಿಭಟಿಸಿದರು. ಅಲ್ಲದೆ, ಸಾರ್ವಜನಿಕರಿಗೆ ಕರಪತ್ರ ಹಂಚುವ ಮೂಲಕ ವಿವೇಕ ಸ್ಮಾರಕ ನಿರ್ಮಾಣಕ್ಕೆ ಸಹಕರಿಸುವಂತೆ ಮನವಿ ಮಾಡಿದರು.
ನಗರಪಾಲಿಕೆ ಸದಸ್ಯ ಡಿ. ನಾಗಭೂಷಣ್ ಮಾತನಾಡಿ, ಎನ್ಟಿಎಂ ಶಾಲೆಯನ್ನು ದೇವರಾಜ ಶಾಲೆಯಲ್ಲಿ ವಿಲೀನಗೊಳಿಸಬೇಕು. ವಿವೇಕ ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ದೇವರಾಜ ಮೊಹಲ್ಲಾದಲ್ಲಿ 10 ಸಾವಿರ ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಂಡು, ಸಹಿ ಸಂಗ್ರಹವನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಅವರು ಹೇಳಿದರು. ವಿಧಾನಪರಿಷತ್ ಮಾಜಿ ಸದಸ್ಯ ಡಿ. ಮಾದೇಗೌಡ ಇದ್ದರು.
ಇಂದು ದಸಂಸ ಪ್ರತಿಭಟನೆ: ಎನ್ಟಿಎಂ ಶಾಲೆ ಉಳಿಸಲು ಆಗ್ರಹಿಸಿ ಮೇ 27ರ ಬೆಳಗ್ಗೆ 11ಕ್ಕೆ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಶಾಲೆ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕರಾದ ಚೋರನಹಳ್ಳಿ ಶಿವಣ್ಣ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

