ದಿಡ್ಡಹಳ್ಳಿ: ಶಾಲಾ ದಾಖಲಾತಿ ಆಂದೋಲನ
ಕ.ಪ್ರ.ವಾರ್ತೆ ಕೆ.ಆರ್. ನಗರ ಮೇ 28
ಪ್ರತಿಯೊಬ್ಬರು ಕಡ್ಡಾಯವಾಗಿ ಶಿಕ್ಷಣ ಪಡೆದಾಗ ಮಾತ್ರ ರಾಜ್ಯ ಸರ್ಕಾರ ಪ್ರತಿ ವರ್ಷ ಹತ್ತಾರು ಯೋಜನೆಗಳ ಮೂಲಕ ಖರ್ಚು ಮಾಡುತ್ತಿರುವ ಕೋಟ್ಯಂತರ ರು. ಹಣ ಸದುಪಯೋಗವಾಗುತ್ತದೆ ಎಂದು ಹೊಸೂರು ಕ್ಲಸ್ಟರ್ನ ಸಿಆರ್ಪಿ ಮಂಜೇಗೌಡ ಹೇಳಿದರು.
ಕೆ.ಆರ್. ನಗರ ತಾಲೂಕಿನ ದಿಡ್ಡಹಳ್ಳಿ ಗ್ರಾಮದಲ್ಲಿ ಸರ್ವ ಶಿಕ್ಷಣ ಅಭಿಯಾನದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಾಲೆಗೆ ಮಕ್ಕಳ ದಾಖಲಾತಿ ಮಾಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಬಿಸಿಯೂಟ, ಸಮವಸ್ತ್ರ, ಕಲಿಕಾ ಉಪಕರಣಗಳನ್ನು ಉಚಿತವಾಗಿ ನೀಡುವುದರ ಜೊತೆಗೆ ಅರ್ಹ ಶಿಕ್ಷಕರಿಂದ ಶಿಕ್ಷಣ ಸಿಗುತ್ತಿದ್ದು ಖಾಸಗಿ ಶಾಲೆಗಳ ವ್ಯಾಮೋಹ ತೊರೆದು ಉಚಿತವಾಗಿ ಸಿಗುವ ಸೌಲಭ್ಯ ಪಡೆದು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವಂತೆ ಪೋಷಕರಿಗೆ ಕರೆ ನೀಡಿದರು.
ನಂತರ ಶಾಲಾ ವಿದ್ಯಾರ್ಥಿಗಳು ಗ್ರಾಮದಲ್ಲಿ ಭಿತ್ತಿ ಪತ್ರ ಹಿಡಿದು ಶಿಕ್ಷಣವಿಲ್ಲದ ಬದುಕಿನ ಬಗ್ಗೆ ಜಾಗೃತಿ ಮೂಡಿಸಿ ಮನೆ ಮನೆಗೆ ತೆರಳಿ 6 ರಿಂದ 14 ವರ್ಷದೊಳಗಿನ ಮಕ್ಕಳನ್ನು ಶಾಲೆಗೆ ಸೇರಿಸಲು ಮನವಿ ಮಾಡಿದರು. ಇದೇ ವೇಳೆ ಒಂದನೇ ತರಗತಿಗೆ 4 ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲಾಯಿತಲ್ಲದೆ, ಶಾಲೆಯ ಶೈಕ್ಷಣಿಕ ಕಾರ್ಯಕ್ಕೆ ಸಕಲ ಸಿದ್ಧತೆ ಕುರಿತು ಚರ್ಚಿಸಲಾಯಿತು.
ಶಾಲೆಯ ಮುಖ್ಯ ಶಿಕ್ಷಕ ಹಳಿಯೂರು ಆರ್.ಶೇಖರ್, ಎಸ್ಡಿಎಂಸಿ ಅಧ್ಯಕ್ಷ ಮಹದೇವ್, ಸದಸ್ಯರಾದ ಕುಮಾರ್, ಶಿವಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

