ರಸ್ತೆ ಅವ್ಯವಸ್ಥೆ: ಗ್ರಾಮಸ್ಥರ ಪರದಾಟ
ಕೆ.ಆರ್. ನಗರ: ರಾಜ್ಯ ಹೆದ್ದಾರಿ ರಸ್ತೆಯನ್ನು ಅಭಿವೃದ್ಧಿಪಡಿಸಿ ಡಾಂಬರೀಕರಣ ಮಾಡದೆ ಕಾಮಗಾರಿಯನ್ನು ಸ್ಥಗಿತಗೊಳಿಸಿರುವುದರಿಂದ ತಾಲೂಕಿನ ದೊಡ್ಡಹನಸೋಗೆ ಗ್ರಾಮದ ವಾಹನ ಸವಾರರು ಮತ್ತು ಪಾದಚಾರಿಗಳು ಧೂಳುಮಯ ರಸ್ತೆಯಲ್ಲಿ ಸಂಚರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಎರಡು ತಿಂಗಳ ಹಿಂದೆ ತಾಲೂಕಿನ ಕರ್ತಾಳು ಗೇಟಿನಿಂದ ಗಡಿಭಾಗವಾಗಿರುವ ಮಾದಹಳ್ಳಿ ಗ್ರಾಮದವರೆಗೆ ರಸ್ತೆಯನ್ನು ಅಭಿವೃದ್ಧಿಪಡಿಸಿ ಡಾಂಬರು ಕಾಮಗಾರಿಯನ್ನು 12 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ. ಆದರೆ ದೊಡ್ಡಹನಸೋಗೆ ಗ್ರಾಮದ ಆರಂಭದಿಂದ ಕಟ್ಟೆಪುರ ನಾಲೆಯ ಸೇತುವೆಯವರೆಗೆ ಕಾಮಗಾರಿಯನ್ನು ಪೂರ್ಣಗೊಳಿಸದೆ ಮೆಟ್ಲಿಂಗ್ ಮಾಡಿ ಹಾಗೆ ಬಿಟ್ಟಿರುವುದರಿಂದ ವಾಹನ ಸವಾರರು ನಿತ್ಯ ನರಕ ಯಾತನೆ ಅನುಭವಿಸುವಂತಾಗಿದೆ.
ಕೆ.ಆರ್.ನಗರ- ರಾಮನಾಥಪುರ- ತೆರಣಕಾಂಬಿ ರಾಜ್ಯ ಹೆದ್ದಾರಿಯಲ್ಲಿರುವ ಗ್ರಾಮದಲ್ಲಿ ಅರ್ಧ ಕಿ.ಮೀ ಕಾಮಗಾರಿಯನ್ನು ಪೂರ್ಣಗೊಳಿಸದೇ ಇರುವುದರಿಂದ ನಿತ್ಯ ನೂರಾರು ವಾಹನಗಳು ಓಡಾಡುವಾಗ ರಸ್ತೆಗೆ ಮೆಟ್ಲಿಂಗ್ ಮಾಡಿ ಹಾಕಲಾಗಿರುವ ಕಲ್ಲುಗಳು ಕಿತ್ತು ಬಂದು ಧೂಳು ಮನೆಯ ಒಳಕ್ಕೆ ಹಾರುತ್ತಿದ್ದು, ಸಮಸ್ಯೆಯನ್ನು ಕೇಳುವವರೆ ಇಲ್ಲವಾಗಿದೆ. ಕೂಡಲೇ ಸ್ಥಗಿತಗೊಂಡಿರುವ ರಸ್ತೆಯ ಡಾಂಬರೀಕರಣ ಪೂರ್ಣಗೊಳಿಸದಿದ್ದರೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

