ವಾಹನ, ಮನೆ ಕಳ್ಳರ ಸೆರೆ
ಮೈಸೂರು: ಮೈಸೂರು ನಗರದ ಪೊಲೀಸರು 7 ಮಂದಿ ದ್ವಿಚಕ್ರ ವಾಹನ ಕಳ್ಳರು ಹಾಗೂ ಒಬ್ಬ ಮನೆ ಕಳ್ಳನನ್ನು ಬಂಧಿಸಿ ಸುಮಾರು 25 ಲಕ್ಷಕ್ಕೂ ಅಧಿಕ ಮೌಲ್ಯದ ವಾಹನ ಹಾಗೂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ದೇವರಾಜ ಪೊಲೀಸರು 4 ಮಂದಿ ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿ, ಅವರಿಂದ 15 ಲಕ್ಷ ಮೌಲ್ಯದ ಒಟ್ಟು 39 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಎಂ.ಎ. ಸಲೀಂ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಂಡಿ ಠಾಣೆ ಪೊಲೀಸರು ಒಬ್ಬ ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿ 3.35 ಲಕ್ಷ ಮೌಲ್ಯದ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದು, ನರಸಿಂಹರಾಜ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸಿ 2.78 ಲಕ್ಷ ಮೌಲ್ಯದ 10 ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಮೇಟಗಳ್ಳಿ ಠಾಣೆ ಪೊಲೀಸರು ಒಬ್ಬ ಮನೆಕಳ್ಳನನ್ನು ಬಂಧಿಸಿ 4 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ವಿವರಿಸಿದರು.
ದ್ವಿಚಕ್ರ ವಾಹನ ಕಳ್ಳರಾದ ಮಂಡ್ಯ ಜಿಲ್ಲೆಯ ರಘು, ಪ್ರವೀಣ್, ಗಿರೀಶ್, ಸ್ವಾಮಿ, ಮೈಸೂರು ಜಿಲ್ಲೆಯ ಬನ್ನೂರಿನ ಕುತ್ಪುದೀನ್, ಮಂಡಿ ಮೊಹಲ್ಲಾದ ಹಿಫ್ಜುಲ್ಲಾ ಖಾನ್, ಮೀರ್ ಶಂಶುದ್ದೀನ್ ಹಾಗೂ ಮಂಡ್ಯ ಜಿಲ್ಲೆಯ ಮನೆಕಳ್ಳ ಶಿವರಾಜ ಎಂಬವರನ್ನು ಬಂಧಿಸಲಾಗಿದೆ ಎಂದರು.
ಮೈಸೂರು ನಗರದಲ್ಲಿ ನಡೆಯುತ್ತಿದ್ದ ಕಳ್ಳತನ ಪತ್ತೆಗಾಗಿ ಡಿಸಿಪಿಗಳಾದ ಕಲಾಕೃಷ್ಣಸ್ವಾಮಿ , ಎ.ಎಲ್. ರಾಜಣ್ಣ, ಎಸಿಪಿಗಳಾದ ಜೈಮಾರುತಿ, ಸಿ.ಜಿ ಜಗದೀಶ್ ಅವರು ಮಾರ್ಗದರ್ಶನದಲ್ಲಿ ತಂಡ ರಚಿಸಲಾಗಿತ್ತು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

