ರಾಯಚೂರು

ನಕಲು ತಡೆಗೆ ಪೊಲೀಸ್ ಬಂದೋಬಸ್ತ್

Published On :

ಮುದಗಲ್: ಪಟ್ಟಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶಾಂತಿಯುತವಾಗಿ ನಡೆಯಿತು. ನಕಲು ಮಾಡಲು ಯಾವುದೇ ಅವಕಾಶ ನೀಡದೆ ಬಿಗಿ ಪೊಲೀಸ್ ಬಂದೊಬಸ್ತ್ ಮಾಡಲಾಗಿದೆ ಎಂದು ಪರೀಕ್ಷಾ ಕೇಂದ್ರಗಳ ಮಖ್ಯಸ್ಥರಾದ ಬಾಲಚಂದ್ರ ದಾಸರ್, ಎಂ.ಎಚ್. ಗೌಡರ ತಿಳಿಸಿದರು.
ಸ್ಥಳೀಯ ಕ್ರೈಸ್ತ ಜ್ಯೋತಿ ಪ್ರೌಢಶಾಲೆಯಲ್ಲಿ 203ಗಂಡು, 209ಹೆಣ್ಣು ಸೇರಿ ಒಟ್ಟು 402 ವಿದ್ಯಾರ್ಥಿಗಳು 17 ಬ್ಲಾಕ್‌ಗಳಲ್ಲಿ ಪರೀಕ್ಷೆ ಬರೆಯಲು ಆಸನಗಳ ವ್ಯವಸ್ಥೆ ಮಾಡಲಾಗಿದೆ. 26 ಶಿಕ್ಷಕರು ಮತ್ತು 4 ಜನ ಸಿಬ್ಬಂದಿಗಳನ್ನು ನೀಡಲಾಗಿದೆ. ಅದೇ ರೀತಿ ಸರ್ಕಾರಿ ಜೂನಿಯರ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ 281ಗಂಡು, 169ಹೆಣ್ಣು ಮಕ್ಕಳು ಸೇರಿ ಒಟ್ಟು 450 ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿದ್ದರು. 28 ಕೊಠಡಿ ಮೇಲ್ವಿಚಾರಕರು, 4 ಸಿಬ್ಬಂದಿ ಹಾಜರಿದ್ದರು ಎಂದು ತಿಳಿಸಿದರು. 16 ಪ್ರೌಢಶಾಲೆಗಳ ಒಟ್ಟು 852 ವಿದ್ಯಾರ್ಥಿಗಳು ಕನ್ನಡ ವಿಷಯ ಪರೀಕ್ಷೆ ಬರೆದಿದ್ದಾರೆ ಎಂದರು.
ನಕಲು ತಡೆಯಲು ಪಿಎಸ್‌ಐ ಬಸವರಾಜ ಬಿಸನಕೊಪ್ಪ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.