ರಾಯಚೂರು

ತುಂಗಭದ್ರಾ ಎಡದಂಡೆ ಕಾಲುವೆ; ನಿಷೇಧಾಜ್ಞೆ ಜಾರಿ

Published On :

ರಾಯಚೂರು: ಜಿಲ್ಲೆಯಲ್ಲಿ ಸಮರ್ಪಕ ಕುಡಿಯುವ ನೀರೊದಗಿಸಲು ನೀರಿನ ಸಂಗ್ರಹಕ್ಕೆ ಜಿಲ್ಲಾಡಳಿತ ಮುಂದಾಗಿದೆ. ತುಂಗಭದ್ರಾ ಎಡದಂಡೆ ಕಾಲುವೆಯ ಮೈಲು 47ರಿಂದ 100ರವರೆಗಿನ ಪ್ರದೇಶದಲ್ಲಿ ಜಿಲ್ಲೆಯ ಸಿಂಧನೂರು, ಮಾನವಿ, ರಾಯಚೂರು ಪ್ರದೇಶದ ಮೈಲು 90ರಿಂದ 100ರವರೆಗಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್, ಜಿಲ್ಲೆಯ ಸಿಂಧನೂರು, ಮಾನವಿ ಮತ್ತು ರಾಯಚೂರು ತಾಲೂಕುಗಳ ಜನತೆಗೆ ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಮೈಲು 47 ರಿಂದ 100ರವರೆಗಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ತಿಳಿಸಿದ್ದಾರೆ.
ಏ.6ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಹೊರತುಪಡಿಸಿ ಬೇರೆಯವರು ಕಾಲುವೆಯ ತೂಬುಗಳನ್ನು ತೆರೆಯುವುದು, ಮುಚ್ಚುವುದನ್ನು ನಿಷೇಧಿಸಲಾಗಿದೆ. ನೀರಾವರಿ ಇಲಾಖೆಯ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿದ್ದು, ನೀರಿನ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸತಕ್ಕದ್ದು. ಜಿಲ್ಲಾಧಿಕಾರಿಗಳ ಲಿಖಿತ ಪೂರ್ವಾನುಮತಿಯಿಲ್ಲದೇ ಕೇಂದ್ರ ಸ್ಥಾನ ಬಿಡದಂತೆ ಅವರು ಆದೇಶಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.