'ಖಾತ್ರಿ' ಕೂಲಿ ಪಾವತಿಗೆ ಆಗ್ರಹ
ಕನ್ನಡಪ್ರಭ ವಾರ್ತೆ, ರಾಯಚೂರು, ಏ.2
ತಾಲೂಕಿನ ಬಾಯಿದೊಡ್ಡಿ ಗ್ರಾಪಂ ವ್ಯಾಪ್ತಿಯ ಕಡಗಂದೊಡ್ಡಿ ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಬಾಕಿ ಕೂಲಿ ಪಾವತಿಗೆ ಆಗ್ರಹಿಸಿ ಕೂಲಿಕಾರ್ಮಿಕರು ಕರ್ನಾಟಕ ರಾಜ್ಯ ರೈತಸಂಘ(ಕೋಡಿಹಳ್ಳಿ ಬಣ) ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಜಿಪಂ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಜಿಪಂ ಸಿಇಒಗೆ ಮನವಿ ಸಲ್ಲಿಸಿ, ಉದ್ಯೋಗ ಖಾತ್ರಿ ಯೋಜನೆ ಅಡಿ ಕಡಗಂದೊಡ್ಡಿ ಗ್ರಾಮದ ಕೆರೆಯ ಹೂಳೆತ್ತುವ ಕಾರ್ಯವನ್ನು ಕೈಗೊಳ್ಳಲಾಗಿದೆ. ಕಾಮಗಾರಿ ನಿರ್ವಹಿಸಿದ ಕೂಲಿಕಾರ್ಮಿಕರಿಗೆ ಜಿಪಂನಿಂದ 3,44,100 ಕೂಲಿ ಹಣ ಪಾವತಿಯಾಗಿಲ್ಲ ಎಂದು ಆರೋಪಿಸಿದರು.
ಕೂಲಿಕಾರ್ಮಿಕರಿಗೆ ಕೂಲಿ ಹಣ ದೊರೆಯದ್ದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಈ ನಿಟ್ಟಿನಲ್ಲಿ ಕೂಡಲೇ ಬಾಕಿ ಹಣವನ್ನು ಸಂಬಂಧಿಸಿದ ಕಾರ್ಮಿಕರಿಗೆ ಪಾವತಿಸುವ ಮೂಲಕ ನೆರವಾಗಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಜಂಬನಗೌಡ, ಕೆ.ನಾರಾಯಣ, ಕೆ.ಮಹಾದೇವ ಸೇರಿದಂತೆ ಅನೇಕರಿದ್ದರು.
--
ಶಾಲಾ ಕಟ್ಟಡ ನಿರ್ಮಾಣ ಕಳಪೆ: ದೂರು
ರಾಯಚೂರು: ಮಾನವಿ ತಾಲೂಕಿನ ಕುರ್ಡಿ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಕಟ್ಟಡದ ನಿರ್ಮಾಣ ಕಳಪೆಯಾಗಿದ್ದು, ಈ ನಿಟ್ಟಿನಲ್ಲಿ ಶಾಲೆಯ ಮುಖ್ಯಗುರುಗಳು ನಿರ್ಲಕ್ಷ್ಯ ತೋರಿದ್ದಾರೆಂದು ರಾಜ್ಯ ದಲಿತ ಸಂಘರ್ಷ ಸಮಿತಿ ಆರೋಪಿಸಿದೆ. ಈ ಕುರಿತು ಡಿಡಿಪಿಐ ಅವರಿಗೆ ಈಚೇಗೆ ಮನವಿ ಸಲ್ಲಿಸಿರುವ ಸಂಘಟನೆಯ ಮಾನವಿ ತಾಲೂಕು ಸಂಘಟನಾ ಸಂಚಾಲಕ ಭಾಸ್ಕರ್ ಮ್ಯಾತ್ರಿ ಕುರ್ಡಿ, ಕಟ್ಟಡವನ್ನು ಕಳಪೆಯಾಗಿ ನಿರ್ಮಿಸಲಾಗುತ್ತಿದೆ. ಕಾಂಕ್ರೀಟ್ ಹಾಕುವ ಸಂದರ್ಭದಲ್ಲಿ ಅನುಸರಿಸುವ ಯಾವುದೇ ಮಾನದಂಡಗಳನ್ನು ನಿರ್ಮಾಣ ಕಾಮಗಾರಿಯಲ್ಲಿ ಅನುಸರಿಸಿಲ್ಲ. ಕಟ್ಟಡ ನಿರ್ಮಾಣ ಕಾಮಗಾರಿಯತ್ತ ನಿರ್ಲಕ್ಷ್ಯ ತಾಳಿರುವ ಶಾಲೆಯ ಮುಖ್ಯಗುರು, ಎಸ್ಡಿಎಂಸಿ ಅಧ್ಯಕ್ಷರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

