ಸ್ಥಳೀಯರಿಗೆ 'ಕೈ' ಟಿಕೆಟ್ ಕೊಡಿ: ಜೀವಲೆಪ್ಪ
ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಏ.2
ಲಿಂಗಸ್ಗೂರು ಮೀಸಲು ವಿಧಾನಸಭೆ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ನಿಂದ ಸ್ಪರ್ಧಿಸಲು ಸ್ಥಳೀಯರಿಗೆ ಟಿಕೆಟ್ ನೀಡಬೇಕೆಂದು ಬಂಜಾರ ಸಂಘದ ಜಿಲ್ಲಾಧ್ಯಕ್ಷ ಜೀವಲೆಪ್ಪ ನಾಯಕ ಒತ್ತಾಯಿಸಿದರು.
ಪಟ್ಟಣದ ಖಾಸಗಿ ವಸತಿ ಗೃಹದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಅವರು ಬಂಜಾರ ಸಮಾಜದ ಮುಖಂಡ ಟಿ.ಆರ್. ನಾಯಕರಿಗೆ ಪಕ್ಷದ ಟಿಕೆಟ್ ಕೊಡಿಸುವ ಬದಲು ಭೋವಿ ಸಮಾಜದ ಡಿ.ಎಸ್. ಹುಲಗೇರಿ ಅವರಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ.
ಬಂಜಾರ ಸಮುದಾಯದ ಕಡೆಗಣನೆ: ಶಾಸಕ ಬಯ್ಯಾಪುರರು ಲಿಂಗಸ್ಗೂರು ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗುವಲ್ಲಿ ಬಂಜಾರ ಸಮಾಜದ ಮುಖಂಡರ ಶ್ರಮ ಪ್ರಮುಖವಾಗಿತ್ತು. ಆದರೆ ಪ್ರಸ್ತುತ ಚುನಾವಣೆಯಲ್ಲಿ ಬಂಜಾರ ಸಮಾಜವನ್ನು ಕಡೆಗಣಿಸಿರುವುದು ಲಂಬಾಣಿ ಜನಾಂಗದ ವ್ಯಕ್ತಿಗೆ ಟಿಕೆಟ್ ಕೊಡಿಸದೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚುನಾವಣೆಯಲ್ಲಿ ಸ್ಪರ್ಧಿಸಲು ಬೇರೆ ಜಿಲ್ಲೆಯವರಿಗೆ ಮಣೆ ಹಾಕದೆ ಸಮಾಜದ ಟಿ.ಆರ್. ನಾಯಕ ಅಥವಾ ಸ್ಥಳೀಯರು ಯಾರೇ ಇರಲಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು. ಇಲ್ಲದಿದ್ದರೆ ಲಿಂಗಸ್ಗೂರು ಮತ್ತು ಕುಷ್ಟಗಿ ಕ್ಷೇತ್ರದ ಬಯ್ಯಾಪುರ ಬೆಂಬಲಿತ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದರು.
ತಾಪಂ ಉಪಾಧ್ಯಕ್ಷ ಮಾನಪ್ಪ ಚವ್ಹಾಣ, ಗ್ರಾಪಂ ಸದಸ್ಯ ತಂಬಣ್ಣ, ಸಮಾಜದ ಮುಖಂಡರಾದ ನಾರಾಯಣಪ್ಪ ನಾಯಕ, ನೀಲಪ್ಪ ಪವಾರ, ಹರೀಶ ರಾಠೋಡ, ಗೋಪಿಚಂದ, ದೇವಪ್ಪ, ಲೋಕೇಶ, ಬಸನಗೌಡ ನರಕಲದಿನ್ನಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

