ರಾಯಚೂರು

ಪೊಲೀಸ್ ಇಲಾಖೆಗೆ ಸೈಬರ್ ಕ್ರೈಂ ದೊಡ್ಡ ಸವಾಲು: ಬೆಳವಡಿ

Published On :

ಕನ್ನಡಪ್ರಭ ವಾರ್ತೆ, ರಾಯಚೂರು, ಏ.2
ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ನಿರಂತರ ದುಡಿಯುವ ಪೊಲೀಸ್ ಸಿಬ್ಬಂದಿಗೆ ಇಂದು ಸೈಬರ್ ಕ್ರೈಮ್ ಬಹುದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿ ಅಪರಾಧ ತಡೆಗೆ ಅಗತ್ಯ ತಂತ್ರ ಅನುಸರಿಸಬೇಕೆಂದು ನಿವೃತ್ತ ಪೊಲೀಸ್ ಅಧಿಕಾರಿ ವಿ.ಬಿ. ಬೆಳವಡಿ ಹೇಳಿದರು.
ನಗರದ ಜಿಲ್ಲಾ ಪೊಲೀಸ್ ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿ, ಸಮಾಜದ ಎಲ್ಲ ರೀತಿಯ ಸುಧಾರಣೆಯಲ್ಲಿ ಪೊಲೀಸರ ಪಾತ್ರ ಮಹತ್ವದ್ದು. ಅಪರಾಧ ತಡೆಯುವಲ್ಲಿ ಪೊಲೀಸರು ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆಂದು ಶ್ಲಾಘಿಸಿದರು.
ಕ್ಷೇಮಾಭಿವೃದ್ಧಿಗೆ ಕ್ರಮ: ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬದವರ ಕ್ಷೇಮಾಭಿವೃದ್ಧಿಗೆ ಸರ್ಕಾರಗಳು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿವೆ. ಸಂಕಷ್ಟದಲ್ಲಿರುವ ಪೊಲೀಸರು ಮತ್ತು ಅವರ ಕುಟುಂಬದವರಿಗೆ ಸೂಕ್ತ ಸಂದರ್ಭದಲ್ಲಿ ಆರ್ಥಿಕವಾಗಿ ನೆರವಾಗುವ ಮೂಲಕ ಅವರ ಏಳಿಗೆಗೆ ಅಧಿಕಾರಿಗಳು ಮುಂದಾಗಬೇಕೆಂದು ಸಲಹೆ ನೀಡಿದರು.
  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಬಿಸನಳ್ಳಿ ಮಾತನಾಡಿ, ಸಮಾಜವನ್ನು ಶಾಂತಿ ಮತ್ತು ಸುಸ್ಥಿತಿಯಲ್ಲಿಡಲು ದುಡಿಯುವ ಪೊಲೀಸ್ ಸಿಬ್ಬಂದಿ ಹಿತ ಕಾಯಲು ಜಿಲ್ಲಾ ಪೊಲೀಸ್ ಇಲಾಖೆ ಸದಾ ಸಿದ್ಧ. ಈ ನಿಟ್ಟಿನಲ್ಲಿ 2012-13ರಲ್ಲಿ 12ಜನ ನಿವೃತ್ತ ಪೊಲೀಸ್ ಸಿಬ್ಬಂದಿಗೆ 52500 ಆರೋಗ್ಯ ಸಂಬಂಧಿ ನೆರವು ನೀಡಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದ ಹೆಚ್ಚುವರಿ ಎಸ್ಪಿ ಮಹಾಂತೇಶ್ ಅವರನ್ನು ಜಿಲ್ಲಾ ಇಲಾಖೆಯಿಂದ ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.