ಬಿಎಸ್ಸಾರ್- ಜೆಡಿಎಸ್ ಹೊಂದಾಣಿಕೆ ವದಂತಿ
ಕನ್ನಡಪ್ರಭ ವಾರ್ತೆ, ಸಿಂಧನೂರು, ಏ.2
ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ನೊಂದಿಗೆ ಬಿಎಸ್ಸಾರ್ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಳ್ಳುತ್ತದೆ ಎಂಬುದು ಬರಿ ಊಹಾಪೋಹ. ಬಿಎಸ್ಸಾರ್ನಿಂದ ಕೆ.ಕರಿಯಪ್ಪ ಸ್ಪರ್ಧಿಸುವುದು ಖಚಿತ ಎಂದು ಪಕ್ಷದ ನಗರ ಘಟಕದ ಅಧ್ಯಕ್ಷ ಮಹಿನುದ್ದೀನ್ ಎತ್ಮಾರಿ ಹೇಳಿದರು.
ನಗರದಲ್ಲಿ ಮಂಗಳವಾರ ಪಕ್ಷದ ಕಾರ್ಯಾಲಯದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದವರು ವಿನಾಕಾರಣ ಎರಡು ಪಕ್ಷಗಳು ಹೊಂದಾಣಿಕೆಯಾಗುತ್ತವೆ. ಕರಿಯಪ್ಪ ಸ್ಪರ್ಧಿಸುವುದಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಶ್ರೀರಾಮುಲು ಅವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರೊಂದಿಗೆ ಸೌಹಾರ್ದಯುತವಾಗಿ ಬೆಂಗಳೂರಿನಲ್ಲಿ ಭೇಟಿಯಾಗಿದ್ದರು. ಆ ಸಂದರ್ಭದಲ್ಲಿ ಪಕ್ಷದ ಹೊಂದಾಣಿಕೆ ಕುರಿತು ಮಾತನಾಡಿದ್ದಾರೆ. ಸೀಟು ಹೊಂದಾಣಿಕೆಗೆ ಸಂಬಂಧಿಸಿದಂತೆ ಮಾತುಕತೆಗಳು ಫಲಪ್ರದವಾಗಿಲ್ಲ. ಆದರೂ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಪಕ್ಷಗಳು ಇಲ್ಲಸಲ್ಲದ ವದಂತಿಗಳನ್ನು ಹರಿಬಿಡುತ್ತಿವೆ ಎಂದು ಟೀಕಿಸಿದರು.
ಕಳೆದ 6 ತಿಂಗಳ ಹಿಂದೆ ಸಿಂಧನೂರಿಗೆ ಶ್ರೀರಾಮುಲು ಅವರು ಆಗಮಿಸಿದ್ದಾಗ ಕರಿಯಪ್ಪನವರನ್ನು ಸಿಂಧನೂರು ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸಿದ್ದರು. ಸೀಟು ಹೊಂದಾಣಿಕೆ ಆದರೂ ಸರಿ, ಆಗದಿದ್ದರೂ ಸರಿ. ಕರಿಯಪ್ಪ ಕಣದಲ್ಲಿರುತ್ತಾರೆ ಎಂದು ಖಚಿತಪಡಿಸಿದರು.
ಈ ಸಂದರ್ಭದಲ್ಲಿ ಬಿಎಸ್ಸಾರ್ ತಾಲೂಕ ಅಧ್ಯಕ್ಷ ಎಂ. ರಂಗನಗೌಡ ಗೊರೇಬಾಳ, ಮುಖಂಡರಾದ ಎಂ.ದೊಡ್ಡಬಸವರಾಜ, ಹಂಸರಾಜ ಮಾಡಸಿರವಾರ, ಗಂಗಾಧರ ಹೂಗಾರ, ಫಕೀರಪ್ಪ ಹೆಡಗಿನಾಳ, ಮುಜಾಫರ್ ಖಾನ್, ಹನುಮೇಶ ಕುರಕುಂದಿ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

