ರಾಯಚೂರು

ಕೃಷಿ ಅಧಿಕಾರಿಯಿಂದ ಅಕ್ರಮ: ಅಮಾನತಿಗೆ ದರವೇ ಆಗ್ರಹ

Published On :

ಕನ್ನಡಪ್ರಭ ವಾರ್ತೆ, ದೇವದುರ್ಗ, ಏ.3
ಕೃಷಿ ಯಾಂತ್ರೀಕರಣ ಯೋಜನೆ ಅಡಿ ಕೃಷಿ ಯಂತ್ರೋಪಕರಣಗಳನ್ನು ಒದಗಿಸದೇ ಅಕ್ರಮ ಎಸಗಿರುವ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕ ಮಹಾದೇವಪ್ಪ ನಾಯಕ ಅವರನ್ನು ಕೂಡಲೇ ಅಮಾನತುಗೊಳಿಸಬೇಕೆಂದು ದಲಿತ ರಕ್ಷಣಾ ವೇದಿಕೆ ಗುಲ್ಬರ್ಗ ವಿಭಾಗೀಯ ಸಮಿತಿ ಒತ್ತಾಯಿಸಿದೆ.
ಈ ಕುರಿತು ಇತ್ತೀಚೆಗೆ ತಹಸೀಲ್ದಾರ್ ಮೂಲಕ ಕೃಷಿ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಿ, 2011- 12 ಮತ್ತು 2012- 13ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆ ಅಡಿ ಬೆಳೆ ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲು ಕೃಷಿ ಯಂತ್ರೋಪಕರಣಗಳ ವಿತರಣೆಗೆ ರೈತರಿಂದ ಅಗತ್ಯ ದಾಖಲೆಗಳನ್ನು ಪಡೆದು ಕಂಪನಿಗಳೊಂದಿಗೆ ಶಾಮೀಲಾಗಿ ಡೀಸೆಲ್ ಪಂಪ್‌ಸೆಟ್, ಟಿಲ್ಲರ್ ಚಾಲಿತ ಸಸ್ಯ ಸಂರಕ್ಷಣಾ ಉಪಕರಗಳು ಮತ್ತು ನವೀನ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಹಂಚಿಕೆ ಮಾಡದೆ ದುರುಪಯೋಗ ಮಾಡಿಕೊಂಡಿದ್ದಾರೆಂದು ಆರೋಪಿಸಿದೆ.
ಅನುದಾನ ದುರ್ಬಳಕೆ ಆರೋಪ: ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಅಡಿ ಶೇ. 100ರ ಸಹಾಯಧನ ಪರಿಶಿಷ್ಟ ಜಾತಿ ರೈತರಿಗೆ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿ ಸುಧಾರಿಸಲು ಮತ್ತು ಅವರ ಬಡತನ ರೇಖೆಗಿಂತ ಮೇಲೆತ್ತಲು ಅನುಕೂಲವಾಗುವಂತೆ ಅವರ ಜಮೀನುಗಳಲ್ಲಿ ಎಕರೆವಾರು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಅವರಿಗೆ ಉಚಿತ ಬೀಜ, ರಾಸಾಯನಿಕ ಗೊಬ್ಬರ, ಸಸ್ಯ ಸಂರಕ್ಷಣಾ ಔಷಧಿ ಸೇರಿ ವಿವಿಧ ಸರ್ಕಾರಿ ಸವಲತ್ತುಗಳನ್ನು ಒದಗಿಸುವಲ್ಲಿ ಕೃಷಿ ಅಧಿಕಾರಿ ವಿಫಲರಾಗಿದ್ದು ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಆರೋಪಿಸಿದೆ.
ರೈತರ ಹೆಸರಿನಲ್ಲಿ ಭಾರಿ ಭ್ರಷ್ಟಾಚಾರ ಎಸಗಿರುವ ಈ ಅಧಿಕಾರಿಯನ್ನು ಅಮಾನತುಗೊಳಿಸಬೇಕೆಂದು ಸಂಘಟನೆಯ ವಿಭಾಗೀಯ ಅಧ್ಯಕ್ಷ ಹನುಮಂತ ಕೆ. ಹಂಚಿನಾಳ, ಕೆ.ರಾಘವೇಂದ್ರ ಸೋಮಲಾಪೂರ, ರಮೇಶ ಜಂಗಮರ ಹಟ್ಟು, ಲಿಂಗರಾಜ ಗುಂಜಳ್ಳಿ, ಬಸವರಾಜ ಭೋವಿ, ಕುಮಾರ ಬಸಾಪೂರ, ಯಮನೂರಪ್ಪ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.