ರಾಯಚೂರು

ಬಸ್ ಡಿಕ್ಕಿ; ವ್ಯಕ್ತಿ ಸಾವು

Published On :

ರಾಯಚೂರು: ಸಿಂಧನೂರು ತಾಲೂಕಿನ ಕೊಳಬಾಳ ಗ್ರಾಮದಲ್ಲಿ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಮೃತನನ್ನು ಅಮರೇಶ್ ಎಂದು ಗುರುತಿಸಲಾಗಿದೆ.
ಈತ ರಸ್ತೆ ಮೇಲೆ ನಿಂತಿದ್ದಾಗ ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿ ಈತನಿಗೆ ಡಿಕ್ಕಿ ಹೊಡೆದಿದ್ದರಿಂದ ತೀವ್ರ ಗಾಯಗೊಂಡಿದ್ದ. ಈತನನ್ನು ಕೂಡಲೇ ಸಿಂಧನೂರಿನ ಸರ್ಕಾರಿ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗದೇ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎದೆನೋವು; ಸಾವು
ರಾಯಚೂರು: ಸಿಂಧನೂರು ನಗರದ ಕಾರ್ ವರ್ಕ್‌ಶಾಪ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೃತನನ್ನು ಫಾರೂಕ್ ಎಂದು ಗುರುತಿಸಲಾಗಿದೆ. ಈತನಿಗೆ ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಶ್ರೀನಿವಾಸ ಕಾರ್ ಸಲ್ಯೂಶನ್ ಟಾಟಾ ವರ್ಕ್‌ಶಾಪ್‌ನಲ್ಲಿ ಪೇಂಟಿಂಗ್ ಕೆಲಸ ಮಾಡುವಾಗ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಸೇರಿಸುವ ವೇಳೆಗೆ ಆತ ಅಸುನೀಗಿದ್ದನೆಂದು ಪೊಲೀಸರು  ತಿಳಿಸಿದ್ದಾರೆ. ಈ ಕುರಿತು ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.