ರಾಯಚೂರು

ಜಿಲ್ಲೆಯ 7 ಸ್ಥಾನಗಳಲ್ಲಿ ಜೆಡಿಯು ಕಣಕ್ಕೆ

Published On :

ಕನ್ನಡಪ್ರಭ ವಾರ್ತೆ, ರಾಯಚೂರು, ಏ.5
ಜಿಲ್ಲೆಯ ಎಲ್ಲ 7 ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಯು ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಪಕ್ಷದ ಗೆಲವು ನಿಶ್ಚಿತ ಎಂದು ಜೆಡಿಯು ಪಕ್ಷದ ಜಿಲ್ಲಾಧ್ಯಕ್ಷ ಶಾಂತಗೌಡ ಜಾಗೀರದಾರ್ ಹೇಳಿದರು.
ನಗರದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಯಚೂರು ನಗರ ಕ್ಷೇತ್ರಕ್ಕೆ ನೂರ್ ಮಹ್ಮದ್, ರಾಯಚೂರು ಗ್ರಾಮೀಣಕ್ಕೆ ಸೂಗರಪ್ಪ ನಾಯಕ ಅಥವಾ ರಂಗಪ್ಪ ಮ್ಯಾದಾರ್, ಸಿಂಧನೂರಿನಲ್ಲಿ ಶಾಂತಗೌಡ ಜಾಗೀರದಾರ್, ಮಾನವಿಯಲ್ಲಿ ಮುದುಕಪ್ಪ ನಾಯಕ, ದೇವದುರ್ಗದಲ್ಲಿ ಚನ್ನಬಸವ ನಾಯಕ, ಮಸ್ಕಿ ಕ್ಷೇತ್ರದಲ್ಲಿ ಶರಣಪ್ಪ ನಾಯಕ ಅಥವಾ ನರಹರಿ ನಾಯಕ ಹಾಗೂ ಲಿಂಗಸ್ಗೂರು ಕ್ಷೇತ್ರದಲ್ಲಿ ನಂದಪ್ಪ ವಕೀಲರು ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದರು.
ಸಿಂಧನೂರು ಕ್ಷೇತ್ರದಲ್ಲಿ ಮಹಿಳೆಯೊಬ್ಬರನ್ನು ಕಣಕ್ಕಿಳಿಸುವ ಬಗ್ಗೆಯೂ ಪಕ್ಷ ಚಿಂತನೆ ನಡೆಸಿದೆ ಎಂದ ಅವರು, ಪಕ್ಷವು ಭ್ರಷ್ಟಾಚಾರ ರಹಿತ, ನ್ಯಾಯಯುತ ಆಡಳಿತಕ್ಕೆ ಜೆಡಿಯು ಆದ್ಯತೆ ನೀಡಲಿದೆ. ಸಾಲ ರಹಿತ ಸ್ವಾವಲಂಬಿ ರೈತರ ಬದುಕು ಕಟ್ಟಿಕೊಡುವುದು ಪಕ್ಷದ ಮೂಲ ಆಶಯವಾಗಿದೆ ಎಂದು ತಿಳಿಸಿದರು.
ಸರ್ವರಿಗೂ ಸಮಾನ ಶಿಕ್ಷಣ ಹಾಗೂ ಸಮಾನ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತದೆ. ಲೋಕಾಯುಕ್ತ ಬಲವರ್ಧನೆಗೆ ಕ್ರಮ ಕೈಗೊಳ್ಳುವುದು ಪಕ್ಷದ ಗುರಿಗಳಲ್ಲೊಂದು ಎಂದು ತಿಳಿಸಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟ ಆಡಳಿತದಿಂದ ಜನತೆ ಬೇಸತ್ತಿದ್ದು, ತಮ್ಮ ಪಕ್ಷವನ್ನು ಬೆಂಬಲಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.