ಫ್ಲೆಕ್ಸ್ ತೆರವಿಗೆ ಅಧಿಕಾರಿಗಳ ನಿಷ್ಕಾಳಜಿ
ಲಿಂಗಸ್ಗೂರು: ಪ್ರಸಕ್ತ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ವಿವಿಧ ರಾಜಕೀಯ ಪಕ್ಷಗಳ ನಾಯಕರ ಭಾವಚಿತ್ರವುಳ್ಳ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಬೇಕೆಂಬ ಆದೇಶವಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ.
ತಾಲೂಕಿನ ಗುರುಗುಂಟಾ ಗ್ರಾಮದ ನಾಡತಹಸೀಲ್ದಾರ್ ಕಚೇರಿ ಹತ್ತಿರ ಅಟಲ್ಜೀ ಜನಸ್ನೇಹಿ ಕೇಂದ್ರ ಸ್ಥಾಪನೆಯಾದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ನಾಮಫಲಕ(ಫ್ಲೆಕ್ಸ್)ಗಳನ್ನು ಪ್ರತಿಯೊಂದು ಕೇಂದ್ರ ಅಥವಾ ತಹಸೀಲ್ದಾರ್ ಕಚೇರಿ ಮುಂದೆ ಹಾಕಿರುವುದು ಸ್ವಾಗತಾರ್ಹ ಕ್ರಮವಾಗಿದೆ.
ಆದರೆ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದುದರಿಂದ ಪ್ರಧಾನಮಂತ್ರಿ, ಮುಖ್ಯಮಂತ್ರಿ ಆದಿಯಾಗಿ ಯಾವುದೇ ರಾಜಕೀಯ ಪಕ್ಷಗಳ ನಾಯಕರ ಭಾವಚಿತ್ರ, ಭಿತ್ತಿಪತ್ರ, ಬ್ಯಾನರ್, ಬಂಟಿಂಗ್ಸ್ ಸೇರಿದಂತೆ ಪ್ರಚಾರ ಸಾಮಗ್ರಿಯನ್ನು ತೆರವುಗೊಳಿಸಬೇಕೆಂದು ಚುನಾವಣಾ ಆಯೋಗ ಕಟ್ಟುನಿಟ್ಟಿನ ಆದೇಶ ನೀಡಿದೆ.
ಗುರುಗುಂಟಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಹಾಕಲಾದ ಫ್ಲೆಕ್ಸ್ಗಳನ್ನು ತೆರವುಗೊಳಿಸಲಾಗಿದೆ. ಆದರೆ ನಾಡ ತಹಸೀಲ್ದಾರ್ ಕಚೇರಿ ಹತ್ತಿರ ಹಾಕಲಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ರಾಜ್ಯದ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಭಾವಚಿತ್ರವುಳ್ಳ ಅಟಲ್ಜೀ ಜನಸ್ನೇಹಿ ಕೇಂದ್ರದ ಫ್ಲೆಕ್ಸ್ ಮಾತ್ರ ತೆರವುಗೊಳಿಸದೆ ಹಾಗೆಯೇ ಬಿಟ್ಟಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

