ರಾಜ್ಯದಲ್ಲಿ 'ಕೈ'ಗೆ ಗೆಲವು: ಭಾಸ್ಕರ್
ರಾಯಚೂರು: ಕಾಂಗ್ರೆಸ್ ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಲಿದ್ದು, ಅಧಿಕಾರಕ್ಕೆ ಅಗತ್ಯವಿರುವ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಎಐಸಿಸಿ ವೀಕ್ಷಕ ಹಾಗೂ ರಾಜ್ಯಸಭೆ ಸದಸ್ಯ ಆನಂದ ಭಾಸ್ಕರ್ ವಿಶ್ವಾಸ ವ್ಯಕ್ತಪಡಿಸಿದರು.
ಅವರು ನಗರದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಎಲ್ಲ 7 ಸ್ಥಾನಗಳಲ್ಲಿ ಗೆಲ್ಲಿಸುವ ನಿಟ್ಟಿನಲ್ಲಿ ತಾವು ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ವಾಸ್ತವ್ಯ ಹೂಡಿ ಶ್ರಮಿಸುವುದಾಗಿ ತಿಳಿಸಿ, ಪಕ್ಷದ ನಾಯಕರಲ್ಲಿನ ಗೊಂದಲಗಳನ್ನು ಪರಿಹರಿಸುವುದಾಗಿ ಹೇಳಿದರು.
ಬದಲಾವಣೆ ಗಾಳಿ: ಜಿಲ್ಲಾ ಕಾಂಗ್ರೆಸ್ ನಾಯಕರಲ್ಲಿ ಭಿನ್ನಾಭಿಪ್ರಾಯಗಳಿರುವುದು ಗಮನಕ್ಕೆ ಬಂದಿದೆ. ಆದರೆ ಅಂಥ ಎಲ್ಲ ಸಮಸ್ಯೆಗಳನ್ನು ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಸಮಾಲೋಚಿಸಿ ಸಮನ್ವಯದ ಮೂಲಕ ಬಗೆಹರಿಸುವುದಾಗಿ ಹೇಳಿದ ಅವರು, ಬಿಜೆಪಿ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ ಜನತೆ ಬದಲಾವಣೆ ಬಯಸಿದ್ದಾರೆಂದು ಹೇಳಿದರು.
ಸದ್ಯದ ಪರಿಸ್ಥಿತಿಯಲ್ಲಿ ಜನತೆಗೆ ಸುಭದ್ರ ಹಾಗೂ ಸ್ಥಿರ ಸರ್ಕಾರದ ಅವಶ್ಯಕತೆಯಿದೆ. ಅದು ಕೇವಲ ಕಾಂಗ್ರೆಸ್ನಿಂದ ಮಾತ್ರ ಸಾಧ್ಯ ಎಂಬುದು ಈ ಹಿಂದೆ ಅನೇಕ ಸಂದರ್ಭದಲ್ಲಿ ಸಾಬೀತಾಗಿದೆ. ಆ ಹಿನ್ನೆಲೆಯಲ್ಲಿ ಮತದಾರರು ಕಾಂಗ್ರೆಸ್ನತ್ತ ಒಲವು ತೋರಿದ್ದಾರೆಂದು ತಿಳಿಸಿದರು.
ಶೀಘ್ರವೇ ಪಟ್ಟಿ ಅಂತಿಮ: ಗ್ರಾಮೀಣ ಪ್ರದೇಶದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ಕಾಂಗ್ರೆಸ್ ಈ ಸಲ ಅಧಿಕಾರಕ್ಕೆ ಬರಲಿದ್ದು, ಜಿಲ್ಲೆಯ ಎಲ್ಲ 7 ಸ್ಥಾನಗಳಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಿದ್ದಾರೆಂದು ತಿಳಿಸಿದರು.
ಕಾರ್ಯಕರ್ತರ ಹಿತ ಕಾಯುವಲ್ಲಿ ಕಾಂಗ್ರೆಸ್ ಸದಾಸಿದ್ಧ. ಈ ನಿಟ್ಟಿನಲ್ಲಿ ಕಾರ್ಯಕರ್ತರ ಪರಿಶ್ರಮ ಹಾಗೂ ಪ್ರಾಮಾಣಿಕ ಪ್ರಯತ್ನದಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲವು ತಂದುಕೊಡುವುದಾಗಿ ಹೇಳಿದ ಅವರು, ಶಿಸ್ತುಬದ್ಧ ಕಾರ್ಯನಿರ್ವಹಣೆಯಿಂದ ಪಕ್ಷದ ಗೆಲವು ಸಾಧ್ಯ ಎಂದು ನಂಬಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಮಾಜಿ ಸಂಸದ ವೆಂಕಟೇಶ್ ನಾಯಕ, ಜಿಪಂ ಉಪಾಧ್ಯಕ್ಷ ಕೆ. ಶರಣಪ್ಪ, ಬಸವರಾಜ ರೆಡ್ಡಿ, ತಾಯಣ್ಣ ನಾಯಕ, ಶರಣಪ್ಪ ಮೇಟಿ, ಕೆ. ಶಾಂತಪ್ಪ, ಶಿವಮೂರ್ತಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

