ಜೆಡಿಎಸ್ನಿಂದ ಹೈ-ಕ ಸಮಗ್ರ ಅಭಿವೃದ್ಧಿ: ವಜ್ಜಲ್
ಲಿಂಗಸ್ಗೂರು: ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದು ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ಹೈದ್ರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಿದ್ದಾರೆಂದು ಹಂಗಾಮಿ ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟ ಪಡಿಸಿದರು. ಸ್ಥಳೀಯ ತಮ್ಮ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕ್ಷೇತ್ರದ ಜನರ ಅಭಿಪ್ರಾಯದಂತೆ ಇತ್ತೀಚಿಗೆ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಶಾಸಕ ಸ್ಥಾನಕ್ಕೂ ರಾಜಿನಾಮೆ ಸಲ್ಲಿಸಿದ್ದೇನೆ. ಏ.6 ರಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್ಡಿಕೆ ಅವರ ಸಮ್ಮುಖದಲ್ಲಿ ಜೆಡಿಎಸ್ಗೆ ಸೇರ್ಪಡೆಗೊಂಡಿದ್ದು, ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುವುದಾಗಿ ತಿಳಿಸಿದರು. ಕ್ಷೇತ್ರದಲ್ಲಿ ಕಳೆದ 5 ವರ್ಷಗಳ ಅಧಿಕಾರ ಅವಧಿಯಲ್ಲಿ ಕೈಗೊಂಡ ಅನೇಕ ಅಭಿವೃದ್ಧಿ ಕಾರ್ಯಗಳು ಹಾಗೂ ಹೆಚ್ಡಿಕೆ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿವೆ. ಚುನಾವಣೆಯಲ್ಲಿ ಗೆಲುವು ಸಾಧಿಸಿ ಶಾಸಕನಾದರೆ ಕ್ಷೇತ್ರದಲ್ಲಿ ಸಣ್ಣ ಕೈಗಾರಿಕೆ, ಕಾರ್ಖಾನೆಗಳನ್ನು ಸ್ಥಾಪಿಸಿ ನಿರುದ್ಯೋಗಿ ಯುವಕರಿಗೆ ಉದ್ಯೋಗ ಒದಗಿಸುವುದು, ಜನರಿಗೆ ಸಮರ್ಪಕ ಕೆಲಸ ನೀಡಿ ಗುಳೆ ತಡೆಗಟ್ಟುವುದು, ಕುಡಿಯುವ ನೀರು, ರಸ್ತೆ, ವಸತಿ ಮನೆ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಆಶ್ವಾಸನೆ ನೀಡಿದರು.
ಪದಾಧಿಕಾರಿಗಳ ನೇಮಕ
ಲಿಂಗಸ್ಗೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಪಕ್ಷದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿರುತ್ತಾರೆ ಎಂದು ಹಂಗಾಮಿ ಶಾಸಕ, ಜೆಡಿಎಸ್ ನಿಯೋಜಿತ ಅಭ್ಯರ್ಥಿ ಮಾನಪ್ಪ ವಜ್ಜಲ್ ತಿಳಿಸಿದರು. ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಗಿರಿಮಲ್ಲನಗೌಡ ಕರಡಕಲ್, ರಾಜ್ಯ ಕಾರ್ಯದರ್ಶಿಯಾಗಿ ಬಸಣ್ಣ ಕಟ್ಟಿಮನಿ ನರಕಲದಿನ್ನಿ, ರಾಜ್ಯ ಪ್ರಧಾನ ಕಾರ್ಯದರ್ಶಿ (ಅಲ್ಪಸಂಖ್ಯಾತರ ವಿಭಾಗ)ಯಾಗಿ ಎಸ್.ಆರ್. ರಸೂಲ್, ಉಪಾಧ್ಯಕ್ಷರಾಗಿ ಇಸ್ಮಾಯಿಲ್ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ತಾಲೂಕು ಅಧ್ಯಕ್ಷರಾಗಿ ಶಿವಾನಂದ ಐದನಾಳ, ಉಪಾಧ್ಯಕ್ಷರಾಗಿ ಮಲ್ಲಪ್ಪ ಅಡವಿ, ಅಬ್ದುಲ್ ರೈಫ್ ನೂರುಲ್ಲಾಸನ್, ಹನುಮಗೌಡ ಪೊಲೀಸ್ ಪಾಟೀಲ್, ನಾಗರೆಡ್ಡೆಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಹೊನ್ನಪ್ಪ ಮೇಟಿ. ಯುವ ಘಟಕದ(ಜಾತ್ಯತೀತ) ಅಧ್ಯಕ್ಷರಾಗಿ ಗೋವಿಂದ ನಾಯಕ, ಉಪಾಧ್ಯಕ್ಷರಾಗಿ ಯಂಕನಗೌಡ ಪಾಟೀಲ್, ಕಾರ್ಯಾಧ್ಯಕ್ಷರಾಗಿ ವೀರನಗೌಡ ಲೆಕ್ಕಿಹಾಳ, ಪ್ರಧಾನ ಕಾರ್ಯದರ್ಶಿ (ಅಲ್ಪಸಂಖ್ಯಾತ ವಿಭಾಗ)ಯಾಗಿ ವಾಹಿದ್ ಅಬ್ದುಲ್ ಖಾದರ, ಸಂಘಟನಾ ಕಾರ್ಯದರ್ಶಿಯಾಗಿ ವಾಹಿದ್ ಖಾದ್ರಿ ಜಹಗೀರದಾರ ಇವರನ್ನು ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

