ರಾಯಚೂರು

ಮಹಿಳಾ ಸಬಲೀಕರಣ ಕಾರ್ಯಕ್ರಮ

Published On :

ರಾಯಚೂರು: ನಗರದ ಬಿಆರ್‌ಬಿ ಕಾಲೇಜಿನಲ್ಲಿ ಈಚೆಗೆ ಮಹಿಳಾ ಸಬಲೀಕರಣ ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಶಕುಂತಲಾ ಗೋಪಶೆಟ್ಟಿ ಪಾಲ್ಗೊಂಡು ಮಹಿಳಾ ಸಬಲೀಕರಣ-ಸಮಾನ ಅವಕಾಶಗಳು ಹಾಗೂ ಸಕಾರಾತ್ಮಕ ತಾರತಮ್ಯಗಳು ಎಂಬ ವಿಷಯದ ಕುರಿತು ಮಾತನಾಡಿದರು. ಎಲ್‌ವಿಡಿ ಕಾಲೇಜಿನ ಉಪನ್ಯಾಸಕಿ ಕಮಲಾ ನವರತ್ನ ಭಾಗವಹಿಸಿದ್ದರು. ಪ್ರಾಚಾರ್ಯ ವಿಷ್ಣು ಮಾಸ್ತೆ ಉಪಸ್ಥಿತರಿದ್ದರು.
ನಗರದ ವೈದ್ಯೆ ನೇಹಾ ಸುಖಾಣಿ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಕಾಲೇಜಿನಲ್ಲಿ ಅಧ್ಯಯನ ಮಾಡಿ ವಿವಿಧ ಪ್ರಮುಖ ಕೋರ್ಸ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ವರ್ಗದವರು ಪಾಲ್ಗೊಂಡಿದ್ದರು.

ಕೂಲಿ ದರ ಹೆಚ್ಚಳಕ್ಕೆ ಹಮಾಲರ ಒತ್ತಾಯ
ರಾಯಚೂರು: ಎಪಿಎಂಸಿಯಲ್ಲಿ ಕಾರ್ಯನಿರ್ವಹಿಸುವ ಕೂಲಿ ಹಮಾಲಿಗಳ ಕೂಲಿ ದರವನ್ನು ಹೆಚ್ಚಿಸವಂತೆ ರಾಯಚೂರು ಎಪಿಎಂಸಿ ಗಂಜ್ ಹಮಾಲರ ಸಂಘ ಆಗ್ರಹಿಸಿದೆ.
ಈ ಕುರಿತು ಇತ್ತೀಚೆಗೆ ಎಪಿಎಂಸಿ ಅಧ್ಯಕ್ಷರಿಗೆ ಮನವಿ ಸಲ್ಲಿಸಿ, ಸದ್ಯದ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆಯೇರಿಕೆ ಕಂಡಿದ್ದು, ಬಡವರಾದ ಕೂಲಿ ಕಾರ್ಮಿಕರು ಜೀವನ ನಿರ್ವಹಣೆಗೆ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಹಿಂದೊಮ್ಮೆ ಕೂಲಿ ದರ ಹೆಚ್ಚಳಕ್ಕೆ ಮನವಿ ಮಾಡಲಾಗಿತ್ತು. ಆದರೆ ಎಪಿಎಂಸಿ ಆಡಳಿತದಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ.
ಅಗತ್ಯ ವಸ್ತುಗಳ ಬೆಲೆಯೇರಿಕೆಗೆ ತಕ್ಕಂತೆ ಕೂಲಿ ದರವನ್ನು ಹೆಚ್ಚಳ ಮಾಡಬೇಕು. ಈ ನಿಟ್ಟಿನಲ್ಲಿ ಕೂಡಲೇ ಎಪಿಎಂಸಿ ಅಧಿಕಾರಿಗಳ ಹಾಗೂ ಹಮಾಲರ ಸಂಘದ ಪದಾಧಿಕಾರಿಗಳ ಸಭೆ ಕರೆದು ದರ ಹೆಚ್ಚಳದ ಬಗ್ಗೆ ಚರ್ಚಿಸಿ ನಿರ್ಧಾರ ಪ್ರಕಟಿಸುವಂತೆ ಒತ್ತಾಯಿಸಿದ್ದಾರೆ.
ಈ ನಿಟ್ಟಿನಲ್ಲಿ ಎಪಿಎಂಸಿ ಆಡಳಿತವು ತನ್ನ ನಿರ್ಧಾರವನ್ನು ಏ. 14ರೊಳಗೆ ಪ್ರಕಟಿಸದಿದ್ದಲ್ಲಿ ಸಂಘದಿಂದ ಹಂತ ಹಂತವಾಗಿ ಉಗ್ರ ಹೋರಾಟ ನಡೆಸುವುದಾಗಿ ಸಂಘದ ಗೌರವಾಧ್ಯಕ್ಷ ವೀರಭದ್ರಪ್ಪ ವಕೀಲರು, ಅಧ್ಯಕ್ಷ ಪ್ರಹ್ಲಾದ ರೆಡ್ಡಿ, ಕಾರ್ಯದರ್ಶಿ ಗಜ್ಜಿ ನರಸಿಂಹಲು ಸೇರಿ ಅನೇಕರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.