ರಾಯಚೂರು

'ಕೈ' ಕುಲುಕಲು ಮಾಜಿ ಶಾಸಕರ ಹೆಜ್ಜೆ

Published On :

ಕನ್ನಡಪ್ರಭ ವಾರ್ತೆ, ರಾಯಚೂರು, ಏ.8
ನಗರ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧೆಗೆ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿನ ಅಸಮಾಧಾನ ಭುಗಿಲೆದ್ದಿದ್ದು, ಪಕ್ಷಾಂತರ ಪರ್ವಕ್ಕೆ ದಾರಿ ಮಾಡಿದೆ. ಮಾಜಿ ಶಾಸಕ ಪಾಪಾರೆಡ್ಡಿ ಮತ್ತು ಅವರ ಬೆಂಬಲಿಗರು ಕಾಂಗ್ರೆಸ್ ಪಕ್ಷ ಸೇರುವುದಕ್ಕೆ ಈ ಅಸಮಾಧಾನ ಎಡೆಮಾಡಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ನಿಟ್ಟಿನಲ್ಲಿ ಪೂರ್ವಭಾವಿ ಸಿದ್ಧತೆಗೆ ಚಾಲನೆ ನೀಡಿದ್ದಾರೆ.
ನಗರ ಕ್ಷೇತ್ರದಲ್ಲಿ ಕಳೆದ ಅನೇಕ ವರ್ಷಗಳಿಂದ ಬಿಜೆಪಿಯಲ್ಲಿದ್ದು, ಶಾಸಕರಾಗಿಯೂ ಆಯ್ಕೆಯಾಗಿದ್ದ ಪಾಪಾರೆಡ್ಡಿ ಅವರಿಗೆ ಬಿಜೆಪಿ ಹೈಕಮಾಂಡ್ ಈ ಬಾರಿ ಟಿಕೆಟ್ ನಿರಾಕರಿಸಿದ್ದು ತೀವ್ರ ಆಕ್ರೋಶ ಮೂಡಿಸಿದೆ. ಪರಿಣಾಮ ಅವರು ತಮ್ಮ ಬೆಂಬಲಿಗರೊಂದಿಗೆ ನಿರಂತರ ಚರ್ಚೆಯ ನಂತರದಲ್ಲಿ ಈಗ ಕಾಂಗ್ರೆಸ್ನತ್ತ ಹೆಜ್ಜೆ ಹಾಕಲು ನಿರ್ಧರಿಸಿದ್ದಾರೆ.
ಅನಂತ್, ಶಿವನಗೌಡರ ಪಾತ್ರ: ಸದ್ಯದ ಚುನಾವಣೆಯಲ್ಲಿ ತ್ರಿವಿಕ್ರಮ್ ಜೋಷಿ ಅವರಿಗೆ ಟಿಕೆಟ್ ನೀಡಿದ್ದು ಪಾಪಾರೆಡ್ಡಿ ಅವರನ್ನು ಕೆರಳಿಸಿದೆ. ನಗರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಪಾಪಾರೆಡ್ಡಿ ಅವರಿಗೆ ನೀಡಬೇಕಿತ್ತು. ಅದರ ಬದಲಿಗೆ ತ್ರಿವಿಕ್ರಮ್ ಜೋಷಿ ಅವರಿಗೆ ಟಿಕೆಟ್ ನೀಡಿರುವ ಹಿಂದೆ ರಾಷ್ಟ್ರೀಯ ಮುಖಂಡ ಅನಂತಕುಮಾರ್ ಕೈವಾಡವಿದೆ ಎಂಬ ಟೀಕೆಗಳು ಕೇಳಿ ಬಂದಿವೆ.
ಅಷ್ಟೇ ಅಲ್ಲ ದೇವದುರ್ಗ ಶಾಸಕ ಶಿವನಗೌಡ ನಾಯಕ ಅವರೂ ಈ ನಿಟ್ಟಿನಲ್ಲಿ ಪಾಪಾರೆಡ್ಡಿ ಅವರ ಟಿಕೆಟ್ ತಪ್ಪಿಸಲು ಪ್ರಮುಖ ಪಾತ್ರ ವಹಿಸಿದ್ದಾರೆಂದು ಆರೋಪ ಪಾಪಾರೆಡ್ಡಿ ಬೆಂಬಲಿಗರಿಂದ ಕೇಳಿಬಂದಿದೆ.
ಯೋಚಿಸಿದ್ದೊಂದು ನಿರ್ಧಾರ ಮತ್ತೊಂದು: ಈ ಮಧ್ಯೆ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಬೆಂಬಲಿಗರ ಸಭೆಗಳನ್ನು ನಡೆಸಿರುವ ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಪಾಪಾರೆಡ್ಡಿ ಅವರು ಕರ್ನಾಟಕ ಜನತಾ ಪಾರ್ಟಿ ಸೇರಲು ಮೊದಲು ಯೋಚಿಸಿದ್ದಾರೆ. ಆದರೆ ಕೊನೆಯ ಕ್ಷಣದಲ್ಲಿ  ಕಾಂಗ್ರೆಸ್ ಪಕ್ಷವನ್ನೇ ಆಯ್ದುಕೊಳ್ಳಲು ನಿರ್ಧರಿಸಿರುವುದು ಸ್ಪಷ್ಟವಾಗಿದೆ.
ಬಿಜೆಪಿ ಅಭ್ಯರ್ಥಿಗಳ ಸೋಲಿಸುವ ಗುರಿ: ಈ ಕುರಿತು “OÚ«Ú­sÚ®ÚúڒOæQ ಮಾತನಾಡಿದ ಮಾಜಿ ಶಾಸಕ ಪಾಪಾರೆಡ್ಡಿ ಅವರು, ಕಾಂಗ್ರೆಸ್ ಪಕ್ಷವನ್ನು ಸೇರಲು ನಿರ್ಧರಿಸಿರುವುದು ನಿಜ. ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿ ವರಿಷ್ಠರ ನಿರ್ಧಾರದಿಂದ ಬೇಸತ್ತು ಈ ನಿರ್ಧಾರಕ್ಕೆ ಬಂದಿದ್ದಾಗಿ ತಿಳಿಸಿದ ಅವರು, ಬಿಜೆಪಿ ಪಕ್ಷದ ರಾಯಚೂರು ನಗರ, ರಾಯಚೂರು ಗ್ರಾಮೀಣ ಕ್ಷೇತ್ರ ಹಾಗೂ ದೇವದುರ್ಗದ ಅಭ್ಯರ್ಥಿಗಳನ್ನು ಸೋಲಿಸುವುದೇ ತಮ್ಮ ಗುರಿಯೆಂದು ಸವಾಲು ಹಾಕಿದರು.
ಒಂದೆಡೆ ಚುನಾವಣೆಯ ನಾಮಪತ್ರ ಸಲ್ಲಿಕೆಯ ದಿನಾಂಕ ಸಮೀಪಿಸುತ್ತಿದ್ದಂತೆಯೇ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ನಗರ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಹೊರತುಪಡಿಸಿ ಜೆಡಿಎಸ್ ಟಿಕೆಟ್ ಸೋಮವಾರ ಸಂಜೆಯವರೆಗೆ ಅಂತಿಮಗೊಂಡಿರಲಿಲ್ಲ. ಜೆಡಿಎಸ್ನಲ್ಲಿಯೂ ಟಿಕೆಟ್ಗೆ ಪೈಪೋಟಿಯಿದ್ದು, ಟಿಕೆಟ್ ಹಂಚಿಕೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಬಿಜೆಪಿಗೆ ¸Ò’}Ú߮ڰ’: ಸದ್ಯ ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆಯ ಅಸಮಾಧಾನ ಈಗ ಬಹಿರಂಗವಾಗಿದ್ದು, ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಪಕ್ಷದ ಅಭ್ಯರ್ಥಿ ತ್ರಿವಿಕ್ರಮ್ ಜೋಷಿ ಅವರು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದು, ಅವರಿಗೆ ಈ ಅಸಮಾಧಾನ ಎದುರಿಸುವ ನಿಟ್ಟಿನಲ್ಲಿ ಪಕ್ಷದ ಹೈಕಮಾಂಡ್ ಯಾವ ರೀತಿಯ ಸಾಥ್ ನೀಡಲಿದೆ ಎಂಬುದು ಸದ್ಯದ ಪ್ರಶ್ನೆ.

ನಾಳೆ ಬಿಜೆಪಿಗೆ ಪಾಪಾರೆಡ್ಡಿ ಗುಡ್ಬೈ
ರಾಯಚೂರು: ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಎ.ಪಾಪಾರೆಡ್ಡಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ್ದು, ಏ.10ರಂದು ಬಿಜೆಪಿ ತೊರೆಯಲಿದ್ದಾರೆ.
ಈ ಕುರಿತು ಸೋಮವಾರ ಬೆಂಬಲಿಗರ ಸಭೆಯ ನಂತರದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷವನ್ನು ನಗರ ಕ್ಷೇತ್ರದಲ್ಲಿ ಕಟ್ಟಿ ಬೆಳೆಸಿದ ತಮ್ಮನ್ನು ಕಡೆಗಣಿಸಲಾಗಿದೆ. ಟಿಕೆಟ್ ನೀಡದೇ ವಂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏ. 10ರಂದು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ತಿಳಿಸಿದರು.
ಪ್ರಸಕ್ತ ಚುನಾವಣೆಯಲ್ಲಿ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತ್ರಿವಿಕ್ರಮ್ ಜೋಷಿ, ರಾಯಚೂರು ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ತಿಪ್ಪರಾಜು ಮತ್ತು ದೇವದುರ್ಗ ಅಭ್ಯರ್ಥಿ ಶಿವನಗೌಡ ನಾಯಕ ಅವರನ್ನು ಸೋಲಿಸುವುದು ತಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಜತೆ ಕೈಜೋಡಿಸುತ್ತಿರುವುದಾಗಿ ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.