ಹಣ ಸಾಗಣೆ: 6 ಲಕ್ಷ ವಶ
ಇಳಕಲ್ಲ: ಟೊಯೊಟೋ ಕಾರಿನಲ್ಲಿ ಆಕ್ರಮವಾಗಿ ಹಣ ಸಾಗಿಸುತ್ತಿದ್ದ ವೇಳೆ ಸೋಮವಾರ ಇಳಕಲ್ಲ ಪೊಲೀಸರು ಕಾರ್ಯಾಚರಣೆ ನಡೆಸಿ 6 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದಾರೆ. ಹನುಮಸಾಗರದಿಂದ ಇಳಕಲ್ಲ ಕಡೆಗೆ ಹೊರಟಿದ್ದ ಕೆ.ಎ-17, ಎನ್-6353 ನಂಬರಿನ ಟೊಯೊಟೋ ಕಾರನ್ನು ಹನುಮಸಾಗರ ಕ್ರಾಸ್ ಬಳಿ ಪೊಲೀಸರು ತಡೆದು ತಪಾಸಣೆ ನಡೆಸಿದಾಗ ದಾಖಲೆಗಳಿಲ್ಲದೇ ನಾಶೀರ್ ಎಂಬುವವರು ಹಣ ಸಾಗಿಸುತ್ತಿರುವುದು ಪತ್ತೆಯಾಗಿದೆ.
ರಾಜ್ಯ ಮುಕ್ತ ವಿವಿ; ಪುಸ್ತಕ ಮಾರಾಟ
ಮೈಸೂರು: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ತೆಗೆದುಕೊಂಡಿರುವವರ ಅನುಕೂಲಕ್ಕಾಗಿ ಮುಕ್ತಭಂಡಾರ ಎಂಬ ಅಧ್ಯಯನ ಪುಸ್ತಕ ಹೊರತಂದಿದೆ. ಈ ಪುಸ್ತಕದ ಮುಖಬೆಲೆ 125. ಆಸಕ್ತರು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಕಚೇರಿ ವೇಳೆಯಲ್ಲಿ ರಾಜ್ಯ ಮುಕ್ತ ವಿವಿ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ತರಬೇತಿ ಕೇಂದ್ರದಲ್ಲಿ ಪುಸ್ತಕಗಳನ್ನು ಖರೀದಿಸಬಹುದು ಎಂದು ಕುಲಸಚಿವ ಪ್ರೊ. ಬಿ.ಎಸ್. ವಿಶ್ವನಾಥ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ. 0821- 2515944 ಸಂಪರ್ಕಿಸ ಬಹುದು.
'ಅರ್ಹರಿಗೇ ಮತನೀಡಿ'ಕನ್ನಡಪ್ರಭ ವಾರ್ತೆ ಅರಸೀಕೆರೆ ಏ.8ಮತದಾನ ಮಾಡುವಾಗ ಅರ್ಹರು, ಉತ್ತಮರು, ಸಜ್ಜನಿಕೆ ಹೊಂದಿರುವ ಸುಸಂಸ್ಕೃತರು, ಸುಶಿಕ್ಷಿತರಿಗೆ ಮತ ನೀಡಬೇಕೆಂದು ಸಾಣೇಹಳ್ಳಿ ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ಕಿವಿಮಾತು ಹೇಳಿದರು.ಪಟ್ಟಣದ ಹೊಯ್ಸಳೇಶ್ವರ ಕಾಲೇಜು ಆವರಣದಲ್ಲಿ ಶಿವಕುಮಾರ ಬಳಗ ಹಾಗೂ ವೀರಶೈವ ಯುವ ವೇದಿಕೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿರುವ ಶಿವಸಂಚಾರ ನಾಟಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ಭ್ರಷ್ಟರು, ನಯವಂಚಕರು, ಕಳ್ಳರು, ಸುಳ್ಳರು, ಲೂಟಿಕೋರರಿಗೆ ಯಾವುದೋ ಆಮಿಷಕ್ಕೆ ಬಲಿಯಾಗಿ ಮತ ನೀಡಿದರೆ ಮುಂದೆ ನೀವು ಗುಲಾಮರಾಗಿ ಅವರು ದಿವಾನರಾಗಿ ಮೆರೆಯಲು ಅವಕಾಶ ಕೊಟ್ಟಂತಾಗುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

