ಇಂದು ವಾರ್ಷಿಕ ಸ್ನೇಹ ಸಮ್ಮೇಳನ
ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಏ.9ರಂದು ನಗರದಲ್ಲಿ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10.30ಕ್ಕೆ ನಗರದ ರಂಗಮಂದಿರದಲ್ಲಿ ಸಮ್ಮೇಳನವನ್ನು ಜಿಪಂ ಸಿಇಒ ಜ್ಞಾನಪ್ರಕಾಶ್ ಉದ್ಘಾಟಿಸಲಿದ್ದಾರೆ. ಅತಿಥಿಯಾಗಿ ಎಲ್ವಿಡಿ ಕಾಲೇಜಿನ ಪ್ರಾಚಾರ್ಯ ಡಾ.ಶರಣಬಸವ ಖೇಣೇದ್ ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಪ್ರೊ. ಮಹಿಪಾಲ ರೆಡ್ಡಿ ಪಾಟೀಲ್ ವಹಿಸುವರು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ಜೆಡಿಎಸ್ಗೆ ರಸೂಲ್ ನೇಮಕ
ಮುದಗಲ್: ಸ್ಥಳೀಯ ಜೆಡಿಎಸ್ ಮುಖಂಡ ಲಿಂಗಸ್ಗೂರು ಎಪಿಎಂಸಿ ಉಪಾದ್ಯಕ್ಷ ಎಸ್.ಆರ್. ರಸೂಲ ಅವರನ್ನು ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಎಚ್.ಎಂ. ಶಕೀಲ್ ನವಾಜ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೂಡಲೇ ಗುರುತರ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸುವಲ್ಲಿ ತೊಡಗಿಸಿಕೊಳ್ಳಬೇಕೆಂದು ಆದೇಶದಲ್ಲಿ ತಿಳಿಸಿದ್ದಾರೆ.
ಶಿಕ್ಷಕಿಗೆ ಸನ್ಮಾನ
ರಾಯಚೂರು: ರಾಯಚೂರಿನಲ್ಲಿ ದೇವಿನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ನಿವೃತ್ತಿ ಹೊಂದಿದ ಶಿಕ್ಷಕಿ ಕಮಲಾಕ್ಷಿ ದೊಡ್ಡನಗೌಡ ಅವರನ್ನು ಡಿಡಿಪಿಐ ಪರಮೇಶ್ ಅವರು ಸನ್ಮಾನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

