ಚುನಾವಣೆ; ನಾಮಪತ್ರ ಸಲ್ಲಿಕೆ ಸ್ಥಳಗಳು
ರಾಯಚೂರು: ಜಿಲ್ಲೆಯಲ್ಲಿ ನಡೆಯುವ 7 ವಿಧಾನಸಭೆ ಕ್ಷೇತ್ರಗಳ ಚುನಾವಣೆಯ ನಾಮಪತ್ರಗಳ ಸಲ್ಲಿಕೆ ಕಾರ್ಯ ಏ.10ರಿಂದ ಆರಂಭವಾಗಲಿದೆ. ವಿವಿಧೆಡೆ ನಾಮಪತ್ರ ಸಲ್ಲಿಕೆಗೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.
ರಾಯಚೂರು ಗ್ರಾಮೀಣ ವಿಧಾನಸಭೆ ಕ್ಷೇತ್ರದ ನಾಮಪತ್ರಗಳನ್ನು ನಗರದ ತಹಸೀಲ್ದಾರ್ ಕಚೇರಿಯಲ್ಲಿ, ರಾಯಚೂರು ನಗರ ಕ್ಷೇತ್ರದ ನಾಮಪತ್ರಗಳನ್ನು ಸಹಾಯಕ ಆಯುಕ್ತರ ಕಚೇರಿಯಲ್ಲಿ, ಮಾನವಿ ಕ್ಷೇತ್ರಕ್ಕಾಗಿ ಮಾನವಿಯ ತಹಸೀಲ್ ಕಚೇರಿಯಲ್ಲಿ, ದೇವದುರ್ಗ ಕ್ಷೇತ್ರಕ್ಕಾಗಿ ದೇವದುರ್ಗದ ತಹಸೀಲ್ದಾರ್ ಕಚೇರಿ, ಲಿಂಗಸ್ಗೂರು ಕ್ಷೇತ್ರಕ್ಕಾಗಿ ಅಲ್ಲಿನ ಸಹಾಯಕ ಆಯುಕ್ತರ ಕಚೇರಿ, ಸಿಂಧನೂರು ಕ್ಷೇತ್ರಕ್ಕಾಗಿ ಸಿಂಧನೂರಿನ ತಹಸೀಲ್ದಾರ್ ಕಚೇರಿಯಲ್ಲಿ ಹಾಗೂ ಮಸ್ಕಿ ಕ್ಷೇತ್ರಕ್ಕಾಗಿ ಲಿಂಗಸ್ಗೂರು ತಹಸೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸ್ವೀಕರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಂ. ತಿಮ್ಮಪ್ಪ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

