ರಾಯಚೂರು

ಪಕ್ಷಗಳ ಅಭ್ಯರ್ಥಿಗಳ ಸಭೆ: ಅಧಿಕಾರಿಗಳ ಮಾರ್ಗದರ್ಶನ

Published On :

ರಾಯಚೂರು: ನಗರದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಮಂಗಳವಾರ ಸಹಾಯಕ ಆಯುಕ್ತೆ ಮಂಜುಶ್ರೀ ಅವರ ಅಧ್ಯಕ್ಷತೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ನಾಮಪತ್ರ ಭರ್ತಿ ಮಾಡುವ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡುವ ಸಭೆ ಕರೆಯಲಾಗಿತ್ತು.
ಸಹಾಯಕ ಆಯುಕ್ತೆ ಮಂಜುಶ್ರೀ ಸಭೆಯಲ್ಲಿ ಮಾತನಾಡಿ, ವಿವಿಧ ಪಕ್ಷಗಳವರು ಒಂದೇ ಬಾರಿಗೆ ನಾಮಪತ್ರಗಳನ್ನು ಸಲ್ಲಿಸಲು ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಅನಾನೂಕೂಲವಾಗುವುದು. ಆದ್ದರಿಂದ ಬೇರೆ ಬೇರೆ ಸಮಯದಲ್ಲಿ ನಾಮಪತ್ರಗಳನ್ನು ಸಲ್ಲಿಸುವುದು ಒಳ್ಳೆಯದು ಎಂದು  ಸಲಹೆ ನೀಡಿದರು.
ನಾಮಪತ್ರ ಸಲ್ಲಿಕೆಯ ಬಗ್ಗೆ ಮೊದಲೇ ಸಂಬಂಧಿಸಿದ ಅಧಿಕಾರಿಗೆ ಮಾಹಿತಿ ನೀಡುವುದು ಅವಶ್ಯ. ರಜೆ ದಿನಗಳಾದ ಏ.11 ಮತ್ತು 14ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುವುದಿಲ್ಲ. ಆದರೆ 2ನೇ ಶನಿವಾರದ ದಿನವಾದ ಏ.13ರಂದು ನಾಮಪತ್ರಗಳನ್ನು ಸ್ವೀಕರಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.