'ಮಹಾ' ಮಂತ್ರಿ ಪ್ರತಿಕೃತಿ ದಹನ
ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಏ.10
ಮಹಾರಾಷ್ಟ್ರ ಗೃಹ ಸಚಿವ ಆರ್.ಆರ್. ಪಾಟೀಲರ ಇತ್ತೀಚೆಗೆ ಪ್ರಚೋದನಕಾರಿ ಭಾಷಣ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ಪಾಟೀಲರ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳೀಯ ಬಸ್ ನಿಲ್ದಾಣ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಕರ್ನಾಟಕ ಗಡಿ ಭಾಗದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಯ ಪುಂಡರ ಹಾವಳಿ ಹೆಚ್ಚಾಗಿದ್ದು, ಇತ್ತೀಚೆಗೆ ಮಹಾರಾಷ್ಟ್ರ ಗೃಹ ಸಚಿವ ಆರ್.ಆರ್. ಪಾಟೀಲ್ ಕರ್ನಾಟಕ ವಿಧಾನಸಭೆಗೆ 5 ಜನ ಎಂಇಎಸ್ ಶಾಸಕರನ್ನು ಆಯ್ಕೆ ಮಾಡಿದರೆ ಕರ್ನಾಟಕ ವಿಧಾನಸಭೆಯ ಮೇಲೆ ಹಿಡಿತ ಸಾಧಿಸಲು ಸಾಧ್ಯವೆಂದು ಪ್ರಚೋದನಕಾರಿ ಭಾಷಣ ಮಾಡಿರುವುದು ಖಂಡನೀಯ ಕ್ರಮವಾಗಿದೆ.
ಉಂಡ ಮನೆಗೆ ದ್ರೋಹ: ಕನ್ನಡದ ಅನ್ನ ತಿಂದು, ಕರ್ನಾಟಕದಲ್ಲೇ ವಾಸಿಸುವ ನಾಡದ್ರೋಹಿಗಳು ಎಂಇಎಸ್ಗೆ ಬೆಂಬಲಿಸುವುದು ಉಂಡ ಮನೆಗೆ ದ್ರೋಹ ಬಗೆದಂತಾಗಿದ್ದು, ಕೂಡಲೇ ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಿಸಿ ಸಚಿವ ಆರ್.ಆರ್. ಪಾಟೀಲರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
ಕರವೇ ತಾಲೂಕು ಅಧ್ಯಕ್ಷ ಜಿಲಾನಿ ಪಾಶಾ, ಕಾರ್ಯಕರ್ತರಾದ ಶಿವರಾಜ ನಾಯಕ, ಅಜೀಜ್ ಪಾಶಾ, ಬಿ.ಎಸ್. ನಾಯಕ, ರವಿಕುಮಾರ, ಅಲ್ಲಾವುದ್ದಿನ್, ಚಂದ್ರು ನಾಯಕ, ಅಮರೇಶ ನಾಯಕ, ರಾಘವೇಂದ್ರ, ಯಲ್ಲಪ್ಪ, ಜಗದೀಶ, ಶಂಕರ, ಸದ್ದಾಂ ಹುಸೇನ, ಚೇತನ, ನಿತಿನ್, ಗುರುರಾಜ, ವೀರೇಶ ನಾಯಕ, ವಿಜಯ ಬಂಡಿ, ಮೌನೇಶ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

