ಮೂಲ ಕಾರ್ಯಕರ್ತರ ಕಡೆಗಣನೆ; ಅಸಮಾಧಾನ
ಕನ್ನಡಪ್ರಭ ವಾರ್ತೆ, ಮುದಗಲ್, ಏ.10
ಲಿಂಗಸ್ಗೂರು ತಾಲೂಕು ಜೆಡಿಎಸ್ ಪದಾಧಿಕಾರಿಗಳ ನೇಮಕಾತಿಯಲ್ಲಿ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಅನ್ಯಾಯವಾಗಿದೆ ಎಂದು ಮುದಗಲ್ ಬ್ಲಾಕ್ ಜೆಡಿಎಸ್ ಅಧ್ಯಕ್ಷ ಅಮೀರ್ಬೇಗ್ ಉಸ್ತಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದ ಸಂಘಟನೆಗೆ ಶ್ರಮಿಸಿದವರಿಗೆ, ಕಳೆದ 20 ವರ್ಷಗಳಿಂದ ಪಕ್ಷ ಸಂಘಟಿಸಿದ ಕಾರ್ಯಕರ್ತರನ್ನು ಪದಾಧಿಕಾರಿಗಳನ್ನಾಗಿ ನೇಮಿಸದೆ ಇತ್ತೀಚೆಗೆ ಜೆಡಿಎಸ್ ಸೇರಿದ ಶಾಸಕ ಮಾನಪ್ಪ ವಜ್ಜಲರ ಬೆಂಬಲಿಗರನ್ನು ಪದಾಧಿಕಾರಿಗಳನ್ನಾಗಿ ಮಾಡಿರುವುದು ಮೂಲ ಜೆಡಿಎಸ್ ಕಾರ್ಯಕರ್ತರಿಗೆ ನೋವನ್ನುಂಟು ಮಾಡಿದೆ. ತಾಲೂಕಿನಾದ್ಯಂತ ನೂರಾರು ಕಾರ್ಯಕರ್ತರು ಪದಾಧಿಕಾರಿಗಳ ನೇಮಕದ ಬಗ್ಗೆ ತಮ್ಮನ್ನು ಪ್ರಶ್ನಿಸುತ್ತಿದ್ದಾರೆ ಎಂದರು.
ರಸೂಲ್ ನೇಮಕ- ಮತ್ತಷ್ಟು ಅಸಮಾಧಾನ: ಅಲ್ಲದೆ ಅಲ್ಪಸಂಖ್ಯಾತರ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಎಸ್.ಆರ್.ರಸೂಲ್ ಅವರನ್ನು ನೇಮಕ ಮಾಡಿರುವುದು ಮತ್ತಷ್ಟು ಅಸಮಧಾನಕ್ಕೆ ಕಾರಣವಾಗಿದೆ. ರಸೂಲ್ ಈಗಾಗಲೇ ಗ್ರಾಪಂ ಸದಸ್ಯನಿದ್ದು, ಎಪಿಎಂಸಿ ಉಪಾಧ್ಯಕ್ಷನಾಗಿದ್ದು, ಆತನ ಪತ್ನಿ ಪಪಂ ಸದಸ್ಯೆಯಾಗಿದ್ದರೂ ಅವರಿಗೆ ಪದಾಧಿಕಾರಿ ಮಾಡಿರುವುದು ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯ ಮಾಡಿದಂತಾಗಿದೆ.
ತಾಲೂಕು ಪದಾಧಿಕಾರಿಗಳನ್ನು ನೇಮಕ ಮಾಡುವಾಗ ತಮ್ಮ ಗಮನಕ್ಕೆ ತರದೆ ಬೆಂಗಳೂರಲ್ಲಿ ತಮ್ಮ ತಮ್ಮನ್ನು ಬಿಟ್ಟು ರಾಜ್ಯಾಧ್ಯಕ್ಷರ ಬಳಿ ಹೋಗಿ ತಮಗೆ ಬೇಕಾದವರನ್ನು, ತಮ್ಮ ಹಿಂಬಾಲಕರನ್ನು ಪದಾಧಿಕಾರಿಗಳನ್ನಾಗಿ ಮಾಡಿರುವ ಮಾಜಿ ಶಾಸಕ ಮಾನಪ್ಪ ವಜ್ಜಲರ ವರ್ತನೆ ತಮಗೆ ಬೇಸರ ತಂದಿದೆ.
ಮೂಲ ಕಾರ್ಯಕರ್ತರಿಗೆ ನಿರ್ಲಕ್ಷ್ಯ: ತಾಲೂಕಿನಲ್ಲಿ 20 ವರ್ಷಗಳಿಂದ ಪಕ್ಷ ಸಂಘಟನೆ ಮಾಡಿದ ತಮ್ಮನ್ನು ನಿರ್ಲಕ್ಷ್ಯ ಮಾಡಲಾಗಿದೆ. ಆದ್ದರಿಂದ ತಮ್ಮ ಬೆಂಬಲಿಗರ ಮತ್ತು ಜೆಡಿಎಸ್ ಸಂಘಟನೆಗೆ ಶ್ರಮಿಸಿದ ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಮಾಡುವುದಾಗಿ ತಿಳಿಸಿದರು.
ಪದಾಧಿಕಾರಿಗಳ ನೇಮಕ ಮಾಡಿರುವ ಜಿಲ್ಲಾ, ರಾಜ್ಯಾಧ್ಯಕ್ಷರಿಗೆ ಪತ್ರ ಬರೆದು ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯವಾಗಿದೆ. ನೇಮಕಾತಿಯಲ್ಲಿ ಬದಲಾವಣೆ ಮಾಡುವಂತೆ ಮನವಿ ಮಾಡಲಾಗುತ್ತದೆ ಎಂದ ಅವರು, ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷ ಜಂತು ಸೇರಿದಂತಾಗಿದೆ ಎಂದು ಲೇವಡಿ ಮಾಡಿದರು. ಪಪಂ ಮಾಜಿ ಸದಸ್ಯ ಮೈಬೂಬಸಾಬ ಡೋಂಗ್ರಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

