ರೈತಪರ ಕಾಳಜಿಯುಳ್ಳ ಅಭ್ಯರ್ಥಿಗೆ ಮತ ನೀಡಿ
ಕನ್ನಡಪ್ರಭ ವಾರ್ತೆ,ಲಿಂಗಸ್ಗೂರು, ಏ.10
ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಹಣ, ಮದ್ಯದಂತಹ ಆಮಿಷಗಳಿಗೆ ಒಳಗಾಗದೆ ನೀರಾವರಿ, ಕೃಷಿ ಸೇರಿದಂತೆ ರೈತಪರ ಕಾಳಜಿಯುಳ್ಳ ಅಭ್ಯರ್ಥಿಗೆ ಮತ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ ಮನವಿ ಮಾಡಿದರು.
ಸ್ಥಳೀಯ ಪಿಕಾರ್ಡ್ ಬ್ಯಾಂಕ್ನಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ರೈತ ಸಂಘದಿಂದ ಪುಟ್ಟಣಯ್ಯ ಮತ್ತು ನಂಜುಂಡೇಗೌಡ ಸೇರಿದಂತೆ 25 ಕ್ಷೇತ್ರಗಳಲ್ಲಿ ರೈತ ಸಂಘದ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಸಂಘದ ಕಾರ್ಯಕರ್ತರು ಇವರನ್ನು ಹೊರತುಪಡಿಸಿ ಯಾವುದೇ ಪಕ್ಷದ ಪ್ರಚಾರದಲ್ಲಿ ಭಾಗವಹಿಸಬಾರದು. ಇನ್ನುಳಿದ ಕ್ಷೇತ್ರಗಳಲ್ಲಿ ಉತ್ತಮ ಅಭ್ಯರ್ಥಿಗಳಿಗೆ ಮತ ಹಾಕಬೇಕೆಂದು ಏ.5ರಂದು ಸಭೆ ನಡೆಸಿ ತೀರ್ಮಾನಿಸಲಾಗಿದೆ ಎಂದರು.
ಜನಪ್ರತಿನಿಧಿಗಳ ನಿರ್ಲಕ್ಷ್ಯ: ಸರ್ಕಾರ ಕೃಷ್ಣಾ ಎಡದಂಡೆ ಕಾಲುವೆ ದುರಸ್ತಿಗೆ 3 ಸಾವಿರ ಕೋಟಿ ಖರ್ಚು ಮಾಡಲಾಗಿದೆ. ಆದರೆ ಬಲದಂಡೆ ಕಾಲುವೆ ದುರಸ್ತಿ ಹಾಗೂ ವಿಸ್ತರಣೆ, ನಂದವಾಡಗಿ ಏತ ನೀರಾವರಿ ಮತ್ತು 9ಎ, 5ಎ ಕಾಲುವೆ ಕಾಮಗಾರಿ ಆರಂಭಕ್ಕೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ಇದಕ್ಕೆ ಈ ಭಾಗದ ಜನಪ್ರತಿನಿಧಿಗಳ ನಿರ್ಲಕ್ಷ್ಯ ಪ್ರಮುಖ ಕಾರಣವಾಗಿದೆ ಎಂದು ದೂರಿದರು.
ನೀರಾವರಿ ಕಾಲುವೆಗಳು ಸಂಪೂರ್ಣ ಹಾಳಾಗಿ ರೈತರ ಜಮೀನಿಗೆ ಸಮರ್ಪಕವಾಗಿ ನೀರು ತಲುಪುತ್ತಿಲ್ಲ. ರಾಜ್ಯದ 26 ಲಕ್ಷ ಪಂಪಸೆಟ್ ಹೊಂದಿದ ರೈತರು ವಿದ್ಯುತ್ ಅಭಾವದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಸಂಧ್ಯಾ ಸುರಕ್ಷಾ ಸೇರಿದಂತೆ ಇತರೆ ಯೋಜನೆಗಳು ನಿರರ್ಥಕವಾಗಿ ವಯೋವೃದ್ಧರು ಅಲೆದಾಡುವಂತಾಗಿದೆ ಎಂದು ಟೀಕಿಸಿದರು.
ಅಭಿವೃದ್ಧಿಪರ ಅಭ್ಯರ್ಥಿ ಆಯ್ಕೆ ಮಾಡಿ: ನೀರಾವರಿ, ಕೃಷಿ, ಕುಡಿವ ನೀರು ಸೇರಿದಂತೆ ಗ್ರಾಮೀಣ ಜನರಿಗೆ ಮೂಲ ಸೌಕರ್ಯ ಕಲ್ಪಿಸುವ ಚಿಂತನೆಯುಳ್ಳ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕೆಂದು ಮತದಾರರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಸಂಗಣ್ಣ ಮುದಗಲ್, ಅಮರಯ್ಯ ಹುಲಿಗುಡ್ಡ, ನಾಗಪ್ಪ, ದೇವಣ್ಣ, ದುರುಗಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

